ಹುಬ್ಬಳ್ಳಿ: ಕೈ ಮೇಲೆ ಹೋಮ್ ಕ್ವಾರಂಟೈನ್ ಸೀಲ್ ಇದ್ದರು ಕೂಡ ವಿದ್ಯಾರ್ಥಿಗಳು ಎಲ್ಲೆಂದರಲ್ಲಿ ಓಡಾಡುವ ಮೂಲಕ ನಿಯಮ ಉಲ್ಲಂಘನೆ ಮಾಡಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಎಂಬಿಬಿಎಸ್ ವಿದ್ಯಾರ್ಥಿಗಳು ಎಡವಟ್ಟು ಮಾಡಿರುವುದು ಬೆಳಕಿಗೆ ಬಂದಿದೆ.
ಅಂತರ್ ಜಿಲ್ಲೆಯಿಂದ ಬಂದ ವಿದ್ಯಾರ್ಥಿ ಕೈಗೆ ಕ್ವಾರಂಟೈನ್ ಸೀಲ್ ಹಾಕಿದ್ದರೂ ರಾತ್ರಿ ವೇಳೆ ಎಲ್ಲೆಂದರಲ್ಲಿ ಓಡಾಟ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಮಾನ್ಯ ಜನರಿಗೊಂದು ನ್ಯಾಯ ವೈದ್ಯ ವಿದ್ಯಾರ್ಥಿಗಳಿಗೊಂದು ನ್ಯಾಯವೇ ಎಂಬುವಂತ ಪ್ರಶ್ನೆ ಈಗ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
Advertisement
Advertisement
ಊರಿಂದ ಬಂದ ಸ್ನೆಹಿತನನ್ನು ಕರೆದೊಯ್ಯುವ ನೆಪ ಹೇಳಿ ಕೈ ಮೇಲೆ ಕ್ವಾರಂಟೈನ್ ಸೀಲ್ ಇದ್ದರು ಕೂಡ ರಾತ್ರಿ ವೇಳೆ ಓಡಾಟ ನಡೆಸಿದ್ದಾರೆ. ಇತ್ತೀಚೆಗಷ್ಟೇ ಚಿತ್ರದುರ್ಗದಿಂದ ಆಗಮಿಸಿರುವ ವಿದ್ಯಾರ್ಥಿ ಕೈಗೆ ಸೀಲ್ ಹಾಕಿ ಕ್ವಾರಂಟೈನ್ ನಲ್ಲಿರುವಂತೆ ಕಿಮ್ಸ್ ಆಡಳಿತ ಮಂಡಳಿ ಸೂಚನೆ ನೀಡಿತ್ತು. ಆದರೆ ಕ್ವಾರಂಟೈನ್ ನಲ್ಲಿರಬೇಕಿದ್ದ ವಿದ್ಯಾರ್ಥಿ ರಾತ್ರಿ ವೇಳೆ ಬೇಕಾಬಿಟ್ಟಿ ಓಡಾಟ ನಡೆಸಿದ್ದಾರೆ.
Advertisement
ರಾತ್ರಿ ವೇಳೆ ಪೊಲೀಸರ ಕೈಗೆ ಸಿಕ್ಕರೂ ಸರಿಯಾದ ಮಾಹಿತಿ ನೀಡದೇ ವಿದ್ಯಾರ್ಥಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಒಂದೆಡೆ ಕರೋನ ತಡೆಗಟ್ಟುವ ಕುರಿತು ಕಿಮ್ಸ್ ಆಸ್ಪತ್ರೆಯಿಂದ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದರೇ, ಇತ್ತ ವೈದ್ಯ ವಿದ್ಯಾರ್ಥಿಯಿಂದ ಸರ್ಕಾರದ ನಿಯಮ ಉಲ್ಲಂಘನೆಯಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.