ನವದೆಹಲಿ: ಕೇಂದ್ರ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ ಕೊರೊನಾ ಲಸಿಕೆಗೆ ಗರಿಷ್ಟ ದರವನ್ನು ನಿಗದಿಪಡಿಸಿ ಆದೇಶ ಹೊರಡಿಸಿದೆ.
Advertisement
ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿರುವ ಆದೇಶದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ ಕೋವಿಡ್ ಲಸಿಕೆಗಳ ದರ ಪರಿಷ್ಕರಣೆ ಮಾಡಿದೆ. ಪ್ರತಿ ಡೋಸ್ ಕೋವಿಶೀಲ್ಡ್ ಬೆಲೆ 780 ರೂಪಾಯಿ ನಿಗದಿ ಪಡಿಸಿದರೆ, ದೇಶೀ ನಿರ್ಮಿತ ಲಸಿಕೆ ಕೋವ್ಯಾಕ್ಸಿನ್ ನ ಪ್ರತೀ ಡೋಸ್‍ಗೆ 1,410 ರೂ ನಿಗದಿ ಮಾಡಲಾಗಿದೆ. ರಷ್ಯಾ ನಿರ್ಮಿತ ಸ್ಪುಟ್ನಿಕ್ ವಿ ಲಸಿಕೆಗೆ 1145 ರೂ. ನಿಗದಿ ಮಾಡಿದೆ. ಜೊತೆಗೆ ಸರ್ವಿಸ್ ಚಾರ್ಜ್ 150 ರೂಪಾಯಿಗಿಂತ ಹೆಚ್ಚು ವಿಧಿಸುವಂತಿಲ್ಲ ಎಂದು ತಿಳಿಸಿದೆ.
Advertisement
Advertisement
ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 7ರಂದು ದೇಶವನ್ನು ಉದ್ದೇಶಿಸಿ ಮಾತನಾಡಿ, ನೂತನ ಲಸಿಕಾ ನೀತಿ ಪ್ರಕಟಿಸಿದ್ದರು. ಇದೀಗ ಖಾಸಗಿ ಅಸ್ಪತ್ರೆಗಳಿಗೆ ಲಸಿಕಾ ದರ ನಿಗದಿಯಾಗಿದೆ. ಇದನ್ನೂ ಓದಿ: ಜೂನ್ 21ರಿಂದ ಕೇಂದ್ರದಿಂದ ಎಲ್ಲರಿಗೂ ಉಚಿತ ಲಸಿಕೆ: ಪ್ರಧಾನಿ ಮೋದಿ ಘೋಷಣೆ
Advertisement
Revised guidelines for the National COVID19 Vaccination Programme has been announced.
Following price caps will be applicable and strict action will be taken in case of any discrepancy. pic.twitter.com/2s1QqDP7tM
— Dr. Ashwathnarayan C. N. (@drashwathcn) June 8, 2021
ಮೋದಿ ಭಾಷಣದಲ್ಲಿ ಹೇಳಿದ್ದೇನು?:
ಕೊರೊನಾ ಎರಡನೇ ಅಲೆಯ ವಿರುದ್ಧ ಭಾರತ ಹೋರಾಡುತ್ತಿದೆ. ಅನೇಕ ಕುಟುಂಬಗಳು ತಮ್ಮವರನ್ನು ಕಳೆದುಕೊಂಡಿದ್ದಾರೆ. ಇದು 100 ವರ್ಷಗಳಲ್ಲಿಯೇ ಅತಿ ದೊಡ್ಡ ಮಹಾಮಾರಿ. ಕೋವಿಡ್ ವಿರುದ್ಧ ಹೋರಾಟದ ವೇಳೆ ದೇಶದಲ್ಲಿಯೇ ಹೊಸ ಆರೋಗ್ಯ ವ್ಯವಸ್ಥೆ ನಿರ್ಮಾಣವಾಗಿದೆ. ವೆಂಟಿಲೇಟರ್, ಆಕ್ಸಿಜನ್ ಸೇರಿದಂತೆ ವೈದ್ಯಕೀಯ ಉತ್ಪನ್ನಗಳಿಗಾಗಿ ಯುದ್ಧನೋಪಾದಿಯಲ್ಲಿ ಕೆಲಸ ಮಾಡಲಾಯ್ತು. ವಿಶ್ವದ ಯಾವುದೇ ಭಾಗದಲ್ಲಿ ಲಭ್ಯವಿರುವ ಔಷಧಗಳನ್ನು ತರಲಾಯ್ತು. ಈ ಹೋರಾಟದಲ್ಲಿ ಯಾವುದೇ ನಿರ್ಲಕ್ಷ್ಯ ಮಾಡಿಲ್ಲ.
Union Health Ministry caps charges for administration of Covishield at Rs 780, Covaxin at Rs 1,410, and Sputnik V at Rs 1,145 in private hospitals, based on the prices currently declared by vaccine manufacturers.
— ANI (@ANI) June 8, 2021
ಜನವರಿ 16ರಿಂದ ಏಪ್ರಿಲ್ ಅಂತ್ಯದವರೆಗೆ ಲಸಿಕಾಕರಣ ಕೇಂದ್ರದ ಕಣ್ಗಾವಲಿನಲ್ಲಿಯೇ ನಡೆಯಿತು. ಆದ್ರೆ ಲಸಿಕೆ ಸಂಬಂಧ ಟೀಕೆಗಳು ಕೇಳಿ ಬಂದಿದ್ದವು. ದೇಶದ ಒಂದು ವರ್ಗದ ಬಗ್ಗೆ ಲಸಿಕೆ ಬಗ್ಗೆ ಕ್ಯಾಂಪೇನ್ ಸಹ ನಡೆಸಿದವು. ಕೇಂದ್ರ ಲಸಿಕೆ ನೀಡುವ ಕಾರ್ಯಕ್ರಮವನ್ನ ಕೇಂದ್ರಿಕರಣ ಮಾಡಿಕೊಳ್ಳುತ್ತಿದೆ ಎಂದು ಹಲವು ರಾಜ್ಯ ಸರ್ಕಾರಗಳು ಆರೋಪಿಸಿದವು. ಹಾಗಾಗಿ ಅವರಿಗೂ ಶೇ.50ರಷ್ಟು ಜವಾಬ್ದಾರಿಯನ್ನ ನೀಡಲಾಯ್ತು. ಮೇನಲ್ಲಿ ಲಸಿಕೆಗೆ ಬೇಡಿಕೆ ಹೆಚ್ಚಾಗುತ್ತಿದ್ದಂತೆ ಕೆಲ ರಾಜ್ಯಗಳು ಮೊದಲಿನ ವ್ಯವಸ್ಥೆಯೇ ಚೆನ್ನಾಗಿತ್ತು ಎಂದು ಹೇಳಲಾರಂಭಿಸಿದವು. ಹಾಗಾಗಿ ಲಸಿಕೆಯ ಪೂರ್ಣ ಹಂಚಿಕೆಯನ್ನ ಕೇಂದ್ರವೇ ತೆಗೆದುಕೊಳ್ಳಲಿದೆ. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಭಾರತ ಸರ್ಕಾರ ಕೊರೊನಾ ಲಸಿಕೆ ನೀಡಲಿದೆ. ಇದನ್ನೂ ಓದಿ: ಲಸಿಕೆ ಪಡೆದ ಬಳಿಕ ರಕ್ತ ಹೆಪ್ಪುಗಟ್ಟುತ್ತಾ? ಅಲರ್ಜಿ ಹೊಂದಿರುವವರು ಲಸಿಕೆ ಪಡೆಯಬಹುದೇ? – ಅನುಮಾನಗಳಿಗೆ ಇಲ್ಲಿದೆ ಉತ್ತರ
My address to the nation. Watch. https://t.co/f9X2aeMiBH
— Narendra Modi (@narendramodi) June 7, 2021
ಖಾಸಗಿ ಆಸ್ಪತ್ರೆಗಳಿಗೆ ಶೇ.25ರಷ್ಟು ಖರೀದಿ ನಿಯಮದಲ್ಲಿ ಬದಲಾವಣೆ ಇಲ್ಲ. ಖಾಸಗಿ ಆಸ್ಪತ್ರೆಗಳು 125 ರೂ.ಗಿಂತ ಹೆಚ್ಚಿನ ಸರ್ವಿಸ್ ಚಾರ್ಜ್ ಪಡೆಯುವಂತಿಲ್ಲ. ಕೋವಿನ್ ಆ್ಯಪ್ ಬಗ್ಗೆ ವಿಶ್ವದಲ್ಲಿ ಮೆಚ್ಚುಗೆ ವ್ಯಕ್ತವಾಗಿದ್ದು, ಅವರೂ ಸಹ ನಮ್ಮ ಮಾದರಿಯಲ್ಲಿಯೇ ಲಸಿಕೆ ವಿತರಣೆ ಮಾಡಲು ಮುಂದಾಗಿವೆ ಎಂದು ತಿಳಿಸಿದರು.