Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಖಾಸಗಿ ಶಾಲೆಗಳ ಶುಲ್ಕ – ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಖಾಸಗಿ ಶಾಲೆಗಳ ಶುಲ್ಕ – ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ

Bengaluru City

ಖಾಸಗಿ ಶಾಲೆಗಳ ಶುಲ್ಕ – ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ

Public TV
Last updated: June 15, 2021 12:49 pm
Public TV
Share
2 Min Read
Siddu BSY copy
SHARE

ಬೆಂಗಳೂರು: ಶುಲ್ಕ ವಿಚಾರದಲ್ಲಿ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಉಂಟಾಗಿರುವ ಸಂಘರ್ಷವನ್ನು ತಕ್ಷಣ ನಿವಾರಿಸುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಪೋಷಕರು ಪಾವತಿಸಬೇಕಾದ ರಿಯಾಯ್ತಿ ಶುಲ್ಕವನ್ನು ಸರ್ಕಾರವೇ ನಿರ್ಧರಿಸಬೇಕು ಮತ್ತು ಸರ್ಕಾರದ ನಿರ್ಧಾರ ಕಟ್ಟುನಿಟ್ಟಿನ ಜಾರಿ ಆಗುವಂತೆ ಕ್ರಮ ವಹಿಸಬೇಕು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ತಡೆ ಹಿಡಿದಿರುವ ಸಂಬಳ ನೀಡಬೇಕು ಎಂದು ಆಗ್ರಹಿಸಿದ್ದಾರೆ.

School Fees 2 medium

ಖಾಸಗಿ ಶಾಲಾ ಆಡಳಿತ ಮಂಡಳಿಗಳು ಬ್ಯಾಂಕುಗಳಿಗೆ ಪಾವತಿಸಬೇಕಾದ ಕೊರೋನಾ ಅವಧಿಯಲ್ಲಿನ ಸಾಲದ ಮೇಲಿನ ಬಡ್ಡಿ ಮುಂತಾದ ವಿಚಾರಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಅವರಿಗಾಗುವ ಹೊರೆ ತಗ್ಗಿಸಲು ಸಾಧ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಪತ್ರದಲ್ಲಿ ಏನಿದೆ?
ಕೊರೊನಾ ಕಾರಣದಿಂದಾಗಿ ಕಳೆದ ವರ್ಷದಿಂದ ಮಕ್ಕಳು ಶಾಲೆಗಳಿಗೆ ಹೋಗಲು ಸಾಧ್ಯವಾಗಲೇ ಇಲ್ಲ. ತರಗತಿಗಳು ನಡೆಯಲಿಲ್ಲವೆಂದು ಖಾಸಗಿ ಶಾಲೆ-ಕಾಲೇಜುಗಳು ಶಿಕ್ಷಕರಿಗೆ ಸಂಬಳವನ್ನು ನೀಡಿಲ್ಲ. ಸಂಬಳವಿಲ್ಲದೆ ಸಂಕಷ್ಟ ಅನುಭವಿಸುತ್ತಿರುವ ಶಿಕ್ಷಕರು ನರೇಗಾ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಅನೇಕರು ಹಣ್ಣು ತರಕಾರಿ ವ್ಯಾಪಾರಿಗಳಾಗಿದ್ದಾರೆ.  ಇದನ್ನೂ ಓದಿ: ಶುಲ್ಕ ಕಟ್ಟಲು ಒತ್ತಡ ಶಾಲೆಗಳ ವಿರುದ್ಧ ಕ್ರಮಕ್ಕೆ ಶಿಕ್ಷಣ ಸಚಿವರ ಸೂಚನೆ

education fees college cash less medium

ಇಂಥ ಪರಿಸ್ಥಿತಿಯಲ್ಲಿ ಖಾಸಗಿ ಶಾಲೆ ಕಾಲೇಜುಗಳು ವಿದ್ಯಾರ್ಥಿಗಳ ಶುಲ್ಕದಲ್ಲಿ ವಿನಾಯಿತಿ ನೀಡಬೇಕೆಂದು ಪೋಷಕರು ಒತ್ತಾಯ ಮಾಡುತ್ತಿದ್ದಾರೆ. ಪೋಷಕರ ಒತ್ತಾಯಕ್ಕೆ ಮಣಿದ ಸರ್ಕಾರ ಕಳೆದ ವರ್ಷ ಬೋಧನಾ ಶುಲ್ಕದಲ್ಲಿ ಶೇ.30 ರಷ್ಟು ವಿನಾಯ್ತಿ ನೀಡಿ ಶೇ.70 ರಷ್ಟು ಶುಲ್ಕ ಕಟ್ಟಬೇಕೆಂದು ಆದೇಶ ಹೊರಡಿಸಿತ್ತು. ಆದರೆ ಈ ಆದೇಶ ಜಾರಿಗೆ ಬರಲಿಲ್ಲ.

ವಾಹನ ಶುಲ್ಕ ಸೇರಿ ಇತರೆ ಶುಲ್ಕವನ್ನೂ ಕಟ್ಟಿಸಿಕೊಳ್ಳಲಾಗಿದೆ. ಇಂಥ ಸಂದರ್ಭದಲ್ಲಿ ಸರ್ಕಾರ ನಿಷ್ಕ್ರಿಯವಾಗಿ ಕೂರುವುದು ಅಸಾಮರ್ಥ್ಯದ, ಲಾಬಿಗೆ ಮಣಿದಿರುವುದರ ಲಕ್ಷಣ. ಸರ್ಕಾರದ ಆದೇಶಕ್ಕೆ ಕಿಮ್ಮತ್ತು ಕೊಡದ ಖಾಸಗಿ ಶಿಕ್ಷಣ ಸಂಸ್ಥೆಗಳ ಕುರಿತು ಯಾವ ಕ್ರಮ ವಹಿಸಲಾಗಿದೆ? ಪೂರ್ತಿ ಶುಲ್ಕವನ್ನು ಕಟ್ಟಲಾಗದ ಮಕ್ಕಳಿಗೆ ಮುಂದಿನ ತರಗತಿಗಳಿಗೆ ಪ್ರವೇಶ ನೀಡದೆ ಶೋಷಿಸುತ್ತಿರುವ ಶಾಲೆಗಳ ವಿಚಾರದಲ್ಲಿ ಯಾವ ಕ್ರಮ ವಹಿಸಲಾಗಿದೆ?ಎಂದು ರಾಜ್ಯದ ಜನರಿಗೆ ಸ್ಪಷ್ಟಪಡಿಸಬೇಕಿದೆ.

bank

ಜುಲೈ 1 ರಿಂದ ಶೈಕ್ಷಣಿಕ ವರ್ಷದ ತರಗತಿಗಳನ್ನು ಆರಂಭಿಸಲು ಹಾಗೂ ಜೂನ್ 15 ರಿಂದೇ ದಾಖಲಾತಿ ಪ್ರಕ್ರಿಯೆ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಈಗಾಗಲೇ ಅಧಿಸೂಚನೆ ಹೊರಡಿಸಿದೆ. ಆದರೆ, ಶುಲ್ಕ ವಸೂಲಿ ಬಗ್ಗೆ ಇಲಾಖೆ ಯಾವುದೇ ಸ್ಪಷ್ಟ ಸೂಚನೆ ನೀಡಿಲ್ಲ. ಹೀಗಾಗಿ ಕಳೆದ ವರ್ಷದಂತೆಯೇ ಈ ಶೈಕ್ಷಣಿಕ ವರ್ಷದಲ್ಲೂ ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವೆ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ.

ಕಳೆದ ವರ್ಷ ಶಾಲೆಗೆ ಮಕ್ಕಳು ಕಾಲಿಡಲು ಸಾಧ್ಯವಾಗದಿದ್ದರೂ ಬಸ್ ಶುಲ್ಕವನ್ನೂ ವಸೂಲಿ ಮಾಡಿದ ಶಾಲೆಗಳೂ ಇವೆ. ಈ ವರ್ಷವೂ ಇದೇ ಪರಿಸ್ಥಿತಿ ಮುಂದುವರೆದಿದೆ. ಸಾಲದ್ದಕ್ಕೆ ಸರ್ಕಾರ ಶೇ.30 ರಷ್ಟು ಶುಲ್ಕ ಕಡಿತ ಮಾಡಿದ್ದು ಹಿಂದಿನ ವರ್ಷಕ್ಕೆ ಮಾತ್ರ, ಈ ವರ್ಷ ಸರ್ಕಾರವೇ ಪೂರ್ಣ ಶುಲ್ಕ ವಸೂಲಿ ಮಾಡಲು ಒಪ್ಪಿಗೆ ಕೊಟ್ಟಿದೆ ಎಂದು ಆಡಳಿತ ಮಂಡಳಿಗಳು ಪೋಷಕರಿಗೆ ಹೇಳುತ್ತಿವೆ. ಹೀಗಾಗಿ ತಕ್ಷಣ ಸರ್ಕಾರ ಈ ವಿಚಾರದಲ್ಲಿ ತನ್ನ ನಿಲುವು ಏನು ಎನ್ನುವುದನ್ನು ಸ್ಪಷ್ಟಪಡಿಸಬೇಕು ಮತ್ತು ಶುಲ್ಕದ ಪ್ರಮಾಣವನ್ನು ಸರ್ಕಾರವೇ ನಿರ್ಧರಿಸಿ ತನ್ನ ನಿರ್ಧಾರ ಕಟ್ಟುನಿಟ್ಟಾಗಿ ಜಾರಿ ಆಗುವಂತೆ ಕ್ರಮ ವಹಿಸಬೇಕು ಎಂದು ಸಿದ್ದರಾಮಯ್ಯ ಅವರು ಪತ್ರದಲ್ಲಿ ಆಗ್ರಹಿಸಿದ್ದಾರೆ.

TAGGED:kannada newsletterschoolsiddaramaiahಕೊರೊನಾಕೊರೊನಾ ವೈರಸ್ಕೋವಿಡ್ 19ಖಾಸಗಿ ಶಾಲೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
50 minutes ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
1 hour ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
2 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
3 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
3 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?