ಕೋಲಾರ: ಕೊರೊನಾ ಸಂಕಷ್ಟದ ಮಧ್ಯೆ ಖಾಸಗಿ ಶಾಲೆ ಪೋಷಕರನ್ನು ಸುಲಿಗೆ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ಪೋಷಕರು ಇಂದು ನಗರದ ಚಿನ್ಮಯ ಶಾಲೆಗೆ ತೆರೆಳಿ ಆಡಳಿತ ಮಂಡಳಿ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ್ದಾರೆ.
Advertisement
ಆನ್‍ಲೈನ್ ಕ್ಲಾಸ್, ಹೋಮ್ ವರ್ಕ್ ಕೊಟ್ಟು ಶುಲ್ಕ ಪಾವತಿ ಮಾಡುವಂತೆ ಖಾಸಗಿ ಶಾಲೆಯ ಆಡಳಿತ ಮಂಡಳಿ ಪೋಷಕರಿಗೆ ಒತ್ತಾಯ ಮಾಡುತ್ತಿದೆ. ಸರ್ಕಾರ ಶೇ.70 ರಷ್ಟು ಶುಲ್ಕ ಮಾತ್ರ ಪಾವತಿ ಮಾಡುವಂತೆ ಸೂಚನೆ ನೀಡಿದೆ. ಆದರೂ ಖಾಸಗಿ ಶಾಲೆಯವರು ಪೂರ್ಣ ಪ್ರಮಾಣದಲ್ಲಿ ಶುಲ್ಕ ಕಟ್ಟುವಂತೆ ಪೀಡಿಸುತ್ತಿದ್ದಾರೆ ಎಂದು ಪೋಷಕರು ಆರೋಪಿಸಿದರು.
Advertisement
Advertisement
ಶುಲ್ಕ ಪಾವತಿ ಮಾಡಿದರೆ ಮಾತ್ರ 1 ರಿಂದ 6ನೇ ತರಗತಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ಕ್ಲಾಸ್ ಮಾಡುತ್ತೇವೆ. ಇಲ್ಲವಾದಲ್ಲಿ ಪರೀಕ್ಷೆಯ ಪ್ರವೇಶ ಪತ್ರವನ್ನೂ ನೀಡುವುದಿಲ್ಲವೆಂದು ಆಡಳಿತ ಮಂಡಳಿ ಪೋಷಕರಿಗೆ ಬೆದರಿಸಿದೆ. ಈ ಹಿನ್ನಲೆಯಲ್ಲಿ ಪೋಷಕರು ಇಂದು ಚಿನ್ಮಯ ಸೇರಿದಂತೆ ಖಾಸಗಿ ಶಾಲೆಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಕೊರೊನಾದಿಂದ ಮಧ್ಯಮ ವರ್ಗದ ಕುಟುಂಬಗಳು ಜೀವನ ನಡೆಸುವುದೇ ಕಷ್ಟವಾಗುತ್ತಿದೆ. ಹೀಗಿರುವಾಗ ಶಾಲೆಗಳು ಶುಲ್ಕ ಪಾವತಿ ಮಾಡುವಂತೆ ಒತ್ತಾಯ ಮಾಡುತ್ತಿರುವುದು ಮತ್ತಷ್ಟು ಹೊರೆಯಾಗುತ್ತಿದೆ ಎಂದು ಅಳಲು ತೋಡಿಕೊಂಡಿದ್ದಾರೆ.