ಮಂಡ್ಯ: ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯುತ್ತಿದ್ದ ಪೋಷಕರು, ಈಗ ಖಾಸಗಿ ಶಾಲೆಗಳ ಮೇಲಿನ ವ್ಯಾಮೋಹವನ್ನು ಬಿಟ್ಟು ಸರ್ಕಾರಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ.
ನಾನು ಕೂಲಿ ಮಾಡಿ ಹೊಟ್ಟೆ ಬಟ್ಟೆಯನ್ನು ಕಟ್ಟಿಯಾದರೂ ನನ್ನ ಮಗುವನ್ನು ಖಾಸಗಿ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮದಲ್ಲೇ ಓದಿಸ ಬೇಕೆಂದು ಹಲವು ಪೋಷಕರು ಆಸೆ ಇಟ್ಟುಕೊಂಡು, ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿ ವಿದ್ಯಾಭ್ಯಾಸ ಮಾಡಿಸುತ್ತಿದ್ದಾರೆ. ಆದರೆ ಇದೀಗ ಕೊರೊನಾ ವೈರಸ್‍ನಿಂದ ಇಡೀ ದೇಶದಲ್ಲಿ ಉಂಟಾದ ಆರ್ಥಿಕ ಬಿಕ್ಕಟ್ಟಿನಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ.
Advertisement
Advertisement
ಇಂದರಿಂದ ಒಂದು ಉಪಯೋಗವಾಗಿದೆ. ಅದೇನೆಂದರೆ ಪೋಷಕರು ಖಾಸಗಿ ಶಾಲೆಗಳ ಮೇಲಿನ ವ್ಯಾಮೋಹ ತೊರೆದು ಸರ್ಕಾರಿ ಶಾಲೆಗಳತ್ತ ಮುಖ ಮಾಡುತ್ತಿದ್ದಾರೆ. ಖಾಸಗಿ ಶಾಲೆಯಲ್ಲಿ ಸಾವಿರಾರು ರೂಪಾಯಿ ಕೊಟ್ಟು ತಮ್ಮ ಮಕ್ಕಳನ್ನು ಓದಿಸುತ್ತಿದ್ದ ಪೋಷಕರು ಲಾಕ್‍ಡೌನ್‍ನಿಂದ ಹಣವಿಲ್ಲದೇ ಖಾಸಗಿ ಶಾಲೆಗಳಿಗೆ ಶುಲ್ಕ ಕಟ್ಟಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸರ್ಕಾರಿ ಶಾಲೆಗಳಲ್ಲಿ ಶುಲ್ಕವಿಲ್ಲದೇ ಉತ್ತಮ ವಿದ್ಯಾಭ್ಯಾಸ ಸಿಗುತ್ತದೆ ಎಂದು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ.
Advertisement
Advertisement
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಾರಗೌಡನಹಳ್ಳಿಯ ಸರ್ಕಾರಿ ಪ್ರೌಢಶಾಲೆಗೆ ಇದೀಗ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಮಕ್ಕಳು ದಾಖಲಾತಿಯಾಗಲು ತಾಮುಂದು ನಾಮುಂದು ಎಂದು ಮುಗಿ ಬೀಳುತ್ತಿದ್ದಾರೆ. ಪ್ರಸಕ್ತ ವರ್ಷದಲ್ಲಿ ಈ ಶಾಲೆಯಲ್ಲಿ ಶೇಕಡ 20ಕ್ಕೂ ಹೆಚ್ಚು ಮಕ್ಕಳು ದಾಖಲಾತಿಯಾಗಿದ್ದಾರೆ. ಈ ಶಾಲೆಯಲ್ಲಿ 8 ರಿಂದ 10 ನೇ ತರಗತಿಯ ವರೆಗೆ ಕ್ಲಾಸ್‍ಗಳು ಇವೆ. ಈ ಮೂರು ತರಗತಿಯಲ್ಲಿ ಸದ್ಯ 500ಕ್ಕೂ ಅಧಿಕ ಮಕ್ಕಳು ದಾಖಲಾತಿಯಾಗಿವೆ ಎಂದು ಶಾಲೆಯ ಶಿಕ್ಷಕರು ಮಾಹಿತಿ ನೀಡಿದ್ದಾರೆ.
ಈ ವರ್ಷ 150ಕ್ಕೂ ಹೆಚ್ಚು ಮಕ್ಕಳು ದಾಖಲಾತಿಯಾಗಿದ್ದು, ಈ ಪೈಕಿ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಮಕ್ಕಳು ಇಲ್ಲಿಗೆ ಸೇರ್ಪಡೆಯಾಗಿರುವುದೇ ಹೆಚ್ಚಿನ ಸಂಖ್ಯೆಯಾಗಿದೆ. ಈ ಶಾಲೆಯಲ್ಲಿ ನೀಡುತ್ತಿರುವ ವಿದ್ಯಾಭ್ಯಾಸ ಮತ್ತು ಲಾಕ್‍ಡೌನ್ ಹೊಡೆತವೆ ಈ ಬದಲಾವಣೆಗೆ ಕಾರಣ ಎನ್ನಲಾಗುತ್ತಿದೆ.