ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ಮಾಜಿ ಸಚಿವರ ವಿರುದ್ಧ ನೀಡಿದ್ದ ದೂರನ್ನು ಹಿಂದಕ್ಕೆ ಪಡೆದಿದ್ದಾರೆ.
ಕಬ್ಬನ್ ಪಾರ್ಕ್ ಠಾಣೆಗೆ ತೆರಳಿ ದಿನೇಶ್ ಕಲ್ಲಹಳ್ಳಿ ದೂರನ್ನು ಹಿಂದಕ್ಕೆ ಪಡೆದಿದ್ದಾರೆ. ಭಾನುವಾರ ವಕೀಲರ ಮೂಲಕ ದೂರನ್ನು ಹಿಂದಕ್ಕೆ ಪಡೆಯಲು ದಿನೇಶ್ ಮುಂದಾಗಿದ್ದರು. ಆದರೆ ಪೊಲೀಸರು ತಾವೇ ಠಾಣೆಗೆ ಬಂದು ದೂರನ್ನು ಹಿಂದಕ್ಕೆ ಪಡೆಯಬೇಕು ಎಂದು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಂಜೆ ಠಾಣೆಗೆ ತೆರಳಿ ದೂರನ್ನು ಹಿಂದಕ್ಕೆ ಪಡೆದಿದ್ದಾರೆ.
Advertisement
Advertisement
ಮಾರ್ಚ್ 2ರಂದು ಮಾಜಿ ಸಚಿವರ ವಿರುದ್ಧ ದಿನೇಶ್ ಕಲ್ಲಹಳ್ಳಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಶುಕ್ರವಾರ ಪೊಲೀಸರ ಮುಂದೆ ಹಾಜರಾಗಿ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದರು. ಇತ್ತ ವಿಡಿಯೋ ಸಂಚಲನ ಸೃಷ್ಟಿಸಿ ಮಾಜಿ ಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಹ ನೀಡಿದ್ದರು. ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ದಿನೇಶ್ ಕಲ್ಲಹಳ್ಳಿ, ಇನ್ನೂ ಮೂವರ ವೀಡಿಯೋಗಳು ತಮ್ಮ ಬಳಿಯಲ್ಲಿರುವ ಬಗ್ಗೆ ಹೇಳಿದ್ದರು.
Advertisement
ಮಾಜಿ ಸಿಎಂ ಕುಮಾರಸ್ವಾಮಿ ಡೀಲ್ ಆರೋಪದ ಹೇಳಿಕೆ ಬೇಸರ ತಂದಿದೆ. ದೂರು ನೀಡಿದ್ದವರನ್ನ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ದಿನೇಶ್ ಆರೋಪಿಸಿದ್ದರು.
Advertisement
ದೂರು ಹಿಂಪಡೆಯುವ ಬಗ್ಗೆ ವಕೀಲರ ಜೊತೆ ಚರ್ಚಿಸಿದ್ದೇನೆ. ಕುಮಾರಸ್ವಾಮಿ ಅವರು ದೂರುದಾರ 5 ಕೋಟಿ ತೆಗೆದುಕೊಂಡು ಡೀಲ್ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಕುಮಾರಸ್ವಾಮಿ ಅವರ ಹೇಳಿಕೆಯಿಂದ ಜನರು ನನ್ನನ್ನು ಸಂಶಯದಿಂದ ನೋಡುತ್ತಿದ್ದಾರೆ. ಈ ಆರೋಪ ನನ್ನ ಸಾಮಾಜಿಕ ಹೋರಾಟಕ್ಕೆ ಹಿನ್ನಡೆ ಅಂತ ನಾನು ಅರ್ಥೈಸಿಕೊಂಡಿದ್ದೇನೆ. ಮಾಹಿತಿ ನೀಡುವವರನ್ನು ಟಾರ್ಗೆಟ್ ಮಾಡೋದು ಬಹಳ ನೋವಿನ ಸಂಗತಿ ಎಂದು ಬೇಸರ ಹೊರ ಹಾಕಿದ್ದರು.