ಕೊಪ್ಪಳ: ಜಿಲ್ಲೆಯ ಗಂಗಾವತಿ ಕ್ಷೇತ್ರದ ಶಾಸಕ ಪರಣ್ಣ ಮುನವಳ್ಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಕುರಿತು ಪಬ್ಲಿಕ್ ಟಿವಿಗೆ ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ಮಾಹಿತಿ ನೀಡಿದ್ದಾರೆ. ಶಾಸಕರಲ್ಲಿ ಕೊರೊನಾ ಪತ್ತೆಯಾಗಿರುವುದು ಅವರ ಬೆಂಬಲಿಗರು ಹಾಗೂ ಸ್ನೇಹಿತರಲ್ಲಿ ಭಯವನ್ನುಂಟು ಮಾಡಿದೆ. ಶಾಸಕರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮುಂದಾಗಿದ್ದು, ಈಗಾಗಲೇ ಪ್ರಯಾಣ ಬೆಳೆಸಿದ್ದಾರೆ.
- Advertisement 2-
- Advertisement 3-
ಶಾಸಕ ಪರಣ್ಣ ಮುನವಳ್ಳಿ ಜುಲೈ 16ರಂದು ಜಿಲ್ಲಾಧಿಕಾರಿಗಳ ಕೋವಿಡ್-19 ನಿಯಂತ್ರಣ ಸಭೆಯಲ್ಲಿ ಸಹ ಭಾಗಿಯಾಗಿದ್ದರು. ಈ ಸಭೆಯಲ್ಲಿ ಕೊಪ್ಪಳ, ಕುಷ್ಟಗಿ, ಕನಕಗಿರಿ ಹಾಗೂ ಗಂಗಾವತಿ ಶಾಸಕರು, ಸಂಸದ ಸಂಗಣ್ಣ ಕರಡಿ ಹಾಗೂ ಜಿಲ್ಲಾಧಿಕಾರಿ ಸೇರಿ ವಿವಿಧ ಅಧಿಕಾರಿಗಳು ಭಾಗಿಯಾಗಿದ್ದರು. ಹೀಗಾಗಿ ಉಳಿದ ಶಾಸಕರು, ಸಂಸದರು ಹಾಗೂ ಅಧಿಕಾರಿಗಳಿಗೂ ಕೊರೊನಾ ಭೀತಿ ಎದರಾಗಿದೆ.