ಕೋಲ್ಕತ್ತಾ: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ, ಪ್ರಸ್ತುತ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ನ ಅಧ್ಯಕ್ಷ ಸೌರವ್ ಗಂಗೂಲಿ ಎದೆನೋವು ಕಾಣಿಸಿಕೊಂಡ ಕಾರಣ ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಆಸ್ಪತ್ರೆಯ ವೈದ್ಯರು ಗಂಗೂಲಿ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದಿದ್ದಾರೆ.
Advertisement
ಗಂಗೂಲಿ ಕಳೆದ ಕೆಲದಿನಗಳ ಹಿಂದೆ ಎದೆ ನೋವಿಗಾಗಿ ಚಿಕಿತ್ಸೆ ಪಡೆದಿದ್ದರು. ಇದೀಗ ಮತ್ತೆ ಎದೆ ನೋವು ಕಾಣಿಸಿಕೊಂಡ ಪರಿಣಾಮ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ವೈದ್ಯರು ಪರೀಕ್ಷಿಸಿ ನಂತರ ಇನ್ನೂಂದು ಸ್ಟಂಟ್ ಅಳವಡಿಸಬೇಕು ಎಂದು ತಿಳಿಸಿದ್ದಾರೆ.
Advertisement
ಜನವರಿ ಮೊದಲ ವಾರದಲ್ಲಿ ಜಿಮ್‍ನಲ್ಲಿ ಅಭ್ಯಾಸ ಮಾಡುತ್ತಿದ ವೇಳೆ ಗಂಗೂಲಿ ಅವರಿಗೆ ಎದೆ ನೋವು ಕಾಣಿಸಿಕೊಂಡು ಆಸ್ಪತ್ರೆಯಲ್ಲಿ 5 ದಿನಗಳ ಕಾಲ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದರು. ಹೃದಯನಾಳಗಳಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಆ್ಯಂಜಿಯೋಪ್ಲಾಸ್ಟಿ ಮಾಡಲಾಗಿತ್ತು. ಇದೀಗ ಮತ್ತೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಸ್ಟಂಟ್ ಅಳವಡಿಕೆ ಮಾಡಬೇಕಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
Advertisement
Advertisement
ಗಂಗೂಲಿ ಅವರ ಆರೋಗ್ಯ ಸ್ಥಿರವಾಗಿದ್ದು ಬೆಳಗ್ಗೆ ಉಪಹಾರ ಸೇವಿಸಿದ್ದಾರೆ. ಇಂದು ಅವರ ಆರೋಗ್ಯ ಸ್ಥಿತಿಯನ್ನು ಗಮನಿಸಿ ಮುಂದಿನ ಚಿಕಿತ್ಸೆಯ ಬಗ್ಗೆ ನಿರ್ಧರಿಸಲಾಗುವುದು ಎಂದು ಅಪೋಲೋ ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದು, ಆರೋಗ್ಯ ಪರೀಕ್ಷಿಸಿ ತಜ್ಞ ವೈದ್ಯರಾದ ಡಾ. ದೇವಿ ಶೆಟ್ಟಿಯವರನ್ನೊಳಗೊಂಡ ವೈದ್ಯರ ತಂಡದೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.