ನವದೆಹಲಿ: ಗಡಿ ವಿಚಾರದಲ್ಲಿ ಯಾವುದೇ ರೀತಿಯ ರಾಜಿ ಮಾತೇ ಇಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಚೀನಾ ಕುತಂತ್ರದ ವಿರುದ್ಧ ಗುಡುಗಿದ್ದಾರೆ.
ಟ್ವೀಟ್ ಮಾಡಿರುವ ಜೆ.ಪಿ.ನಡ್ಡಾ ಅವರು, ಚೀನಾ ಕುತಂತ್ರದಿಂದ ನಮ್ಮ ಕೆಚ್ಚೆದೆಯ ಸೈನಿಕರನ್ನು ಕಳೆದುಕೊಂಡಿದ್ದೇವೆ. ಹುತಾತ್ಮ ಯೋಧರಿಗೆ ಗೌರವ ಸಲ್ಲಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತದ ಪ್ರಾದೇಶಿಕ ಸಮಗ್ರತೆಗೆ ಧಕ್ಕೆಯಾಗುವುದಿಲ್ಲ ಎಂದು ನಾನು ನಿಮಗೆ ಭರವಸೆ ನೀಡಬಲ್ಲೆ. ನಮ್ಮ ಸೈನ್ಯವು ಎಲ್ಲದಕ್ಕೂ ಸಂಪೂರ್ಣವಾಗಿ ಸಜ್ಜುಗೊಂಡಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನನಗೆ ಒಬ್ಬನೇ ಮಗ- ಕಣ್ಣೀರಿಟ್ಟ ಕರ್ನಲ್ ಸಂತೋಷ್ ಬಾಬು ತಾಯಿ
Advertisement
We have lost our brave army men. I pay homage to them.
I can assure you that under the leadership of PM Modi, India's territorial integrity will not be compromised. We now have the political will & our army is fully equipped to take any adversary.
— Jagat Prakash Nadda (@JPNadda) June 16, 2020
Advertisement
ಪೂರ್ವ ಲಡಾಕ್‍ನ ಗಾಲ್ವಾನ್ ಕಣಿವೆಯಲ್ಲಿ ಚೀನಾದೊಂದಿಗೆ ನಡೆದ ಸಂಘರ್ಷದಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಅಷ್ಟೇ ಅಲ್ಲದೆ 17 ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಭಾರತೀಯ ಸೇನೆಯು ಖಚಿತಪಡಿಸಿದೆ.
Advertisement
ದಾಳಿಗೆ ಪ್ರತ್ಯುತ್ತರ ನೀಡಿರುವ ಭಾರತೀಯ ಸೇನೆಯು ಚೀನಾದ 43 ಮಂದಿ ಯೋಧರನ್ನು ಸೆದೆಬಡಿದಿದೆ. ಅಷ್ಟೇ ಅಲ್ಲದೆ 100ಕ್ಕೂ ಹೆಚ್ಚು ಚೀನಾ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ತನ್ನ ಯೋಧರ ಮೃತದೇಹವನ್ನು ಹೊತ್ತೊಯ್ಯಲು ಚೀನಾ ಹೆಲಿಕಾಪ್ಟರ್ ಗಳು ಎಲ್‍ಎಸಿ ಬಳಿ ಹಾರಾಟ ನಡೆಸಿವೆ ಎಂದು ವರದಿಯಾಗಿದೆ.