ಗಣರಾಜ್ಯೋತ್ಸವ- ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣ

Public TV
0 Min Read
BMP

ಬೆಂಗಳೂರು: 72ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣ ನಡೆಯಿತು. ಆಡಳಿತಗಾರರು ಹಾಗೂ ಆಯುಕ್ತರು ಧ್ವಜಾರೋಹಣ ನೆರವೇರಿಸಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಇಂದು ಆಡಳಿತಗಾರರು ಗೌರವ್ ಗುಪ್ತಾ, ಆಯುಕ್ತರು ಎನ್.ಮಂಜುನಾಥ್ ಪ್ರಸಾದ್ ರವರಿಂದ 72ನೇ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿತು.

9eca51f4 2782 4b4f 83fe e184dc697681

ಈ ವೇಳೆ ವಿಶೇಷ ಆಯುಕ್ತರುಗಳಾದ ಮನೋಜ್ ಜೈನ್, ಜೆ.ಮಂಜುನಾಥ್, ಬಸವರಾಜು, ರಾಜೇಂದ್ರ ಚೋಳನ್, ತುಳಸಿ ಮದ್ದಿನೇನಿ, ರವೀಂದ್ರ, ಉಪ ಆಯುಕ್ತರು(ಆಡಳಿತ) ಲಿಂಗಮೂರ್ತಿ, ಸಹಾಯಕ ಆಯುಕ್ತರು(ಆಸ್ತಿಗಳು) ಹರೀಶ್ ನಾಯ್ಕ್, ಪೂರ್ವ ವಲಯದ ಜಂಟಿ ಆಯುಕ್ತರು ಪಲ್ಲವಿ, ಇಂಜಿನಿಯರ್ ವಿಭಾಗದ ಮುಖ್ಯಸ್ಥರು ಎಂ.ಆರ್.ವೆಂಕಟೇಶ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

1089f86e 0d61 4b51 bd69 373154b54360

Share This Article
Leave a Comment

Leave a Reply

Your email address will not be published. Required fields are marked *