ಗದಗ: ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ತುಂಬು ಗರ್ಭಿಣಿಗೆ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನು ಸೀಲ್‍ಡೌನ್ ಮಾಡಲಾಗಿದೆ.
ನಗರದ ಕೆ.ಸಿ ರಾಣಿ ರಸ್ತೆಯಲ್ಲಿರುವ ಈ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ಶಿರಹಟ್ಟಿ ತಾ. ಗೊಜನೂರು ಗ್ರಾಮದ ಗರ್ಭಿಣಿ ಚಿಕಿತ್ಸೆ ಪಡೆದಿದ್ದರು. ಆದರೆ ಶುಕ್ರವಾರ ವರದಿನಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಿದ ವೈದ್ಯರು, ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಆತಂಕ ಮೂಡಿದೆ. ಹೀಗಾಗಿ ಆಸ್ಪತ್ರೆಯನ್ನು ಸೀಲ್‍ಡೌನ್ ಮಾಡಲಾಗಿದೆ.
Advertisement
Advertisement
ಸದ್ಯಕ್ಕೆ ಸೋಂಕಿತ ಗರ್ಭಿಣಿ ಚಿಕಿತ್ಸೆ ಪಡೆದುಹೋದ ನಂತರ ಬಂದು ಹೋದ ಗರ್ಭಿಣಿಯರ ಪತ್ತೆ ಕಾರ್ಯ ಆರಂಭವಾಗಿದೆ. ಆರೋಗ್ಯ ಇಲಾಖೆಯಿಂದ ಆಸ್ಪತ್ರೆಯಲ್ಲಿ ನೋಂದಣಿ ಮಾಡಿದವರ ಮಾಹಿತಿ ಕಲೆ ಹಾಕಲಾಗುತ್ತಿದೆ. ಇಡೀ ಆಸ್ಪತ್ರೆಯನ್ನು ಸೈನಿಟೈಜರ್ ಮಾಡಲಾಗಿದೆ.
Advertisement
ಸೋಂಕಿತ ಮಹಿಳೆಯ ಬ್ಲಡ್ ಟೆಸ್ಟ್, ಓಪಿಡಿ ಮಾಡಿದ ಸಿಬ್ಬಂದಿಯನ್ನು ವೈದ್ಯಕೀಯ ತಪಾಸಣೆ ಮಾಡಿ ಹೋಂ ಕ್ವಾರಂಟೈನ್ ಮಾಡಲಾಗಿದೆ. ಟ್ರಾವೆಲ್ ಹಿಸ್ಟರಿ ಇರದ ತುಂಬು ಗರ್ಭಿಣಿಗೆ ಸೋಂಕು ದೃಢಪಟ್ಟಿದ್ದು, ಕುಟುಂಬಸ್ಥರು ಹಾಗೂ ಸಾರ್ವಜನಿಕರು ಆತಂಕಗೊಂಡಿದ್ದಾರೆ.