ಗದಗ: ನಾಳೆಯಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ನೆಡೆಯಲಿವೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದು ಮತ್ತಷ್ಟು ಆತಂಕ ಹೆಚ್ಚಿಸಿದೆ.
ಈ ವಿದ್ಯಾರ್ಥಿಯಿಂದ ಎರಡನೇ ಬಾರಿ ಪಡೆದ ಗಂಟಲು ದ್ರವ ಮಾದರಿಯನ್ನು ಬೆಂಗಳೂರು ಲ್ಯಾಬ್ ಗೆ ಕಳುಹಿಸಲಾಗಿದೆ. ಇವತ್ತು ರಾತ್ರಿ ಅಥವಾ ನಾಳೆ ಬೆಳಗ್ಗೆ ಅಧಿಕೃತ ಮಾಹಿತಿ ಹೊರಬರಲಿದೆ. ಈ ವಿದ್ಯಾರ್ಥಿ ವಿಜಯಪುರ ಜಿಲ್ಲೆಯಿಂದ ಜೂನ್ 20 ರಂದು ಲಕ್ಷ್ಮೇಶ್ವರ ಪಟ್ಟಣಕ್ಕೆ ಪರೀಕ್ಷೆ ಬರೆಯಲು ಮೂವರು ವಿದ್ಯಾರ್ಥಿಗಳು ಒಂದೇ ಕಾರಿನಲ್ಲಿ ಆಗಮಿಸಿದ್ದರು. ಲಕ್ಷ್ಮೇಶ್ವರ ಪಟ್ಟಣದ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯ ವಿದ್ಯಾರ್ಥಿಗಳು ಇವರಾಗಿದ್ದು, ಈ ಮೂವರ ಪೈಕಿ ಓರ್ವ ವಿದ್ಯಾರ್ಥಿಗೆ ಕೊರೊನಾ ಲಕ್ಷಣಗಳು ಕಂಡು ಬಂದಿದೆ.
Advertisement
ಸೋಂಕಿನ ಲಕ್ಷಣಗಳಿರುವ ವಿದ್ಯಾರ್ಥಿ ಸಂಪರ್ಕದಲ್ಲಿರುವ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಇತರ 10 ವಿದ್ಯಾರ್ಥಿಗಳ ರಕ್ತ ಹಾಗೂ ಗಂಟಲು ದ್ರವ ಮಾದರಿಯನ್ನು ಟೆಸ್ಟ್ ಕಳುಹಿಸಿ ಕೊಡಲಾಗಿದೆ. ನೆಗೆಟಿವ್ ಬಂದ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತೆ. ಪಾಸಿಟಿವ್ ಏನಾದ್ರೂ ಬಂದ್ರೆ ಪರೀಕ್ಷೆಗೆ ಅವಕಾಶ ನೀಡಲ್ಲ. ಇನ್ನು ಉಳಿದ ಪರೀಕ್ಷಾರ್ಥಿಗಳು ಯಾವುದೇ ಭಯ ಪಡುವ ಅಗತ್ಯವಿಲ್ಲ ಅಂತ ಡಿಸಿ ಹೇಳಿದ್ದಾರೆ.