ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಮಹಾಸ್ಫೋಟವಾಗುತ್ತಿದ್ದಂತೆ ಮತ್ತೆ ಒಂದು ತಿಂಗಳು ಬೆಂಗಳೂರಿನಲ್ಲಿ 144 ಸೆಕ್ಷನ್ ಮುಂದುವರಿಕೆ ಮಾಡಲಾಗಿದೆ. ಜುಲೈ 26 ರವರೆಗೆ 144 ಸೆಕ್ಷನ್ ಜಾರಿ ಮಾಡಿ ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಅವರು ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಕೋವಿಡ್ 19 ಹರಡುವುದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮತ್ತೆ ಕಟ್ಟುನಿಟ್ಟಾಗಿ ಕ್ರಮಗಳನ್ನು ಜಾರಿಗೊಳಿಸಿದ್ದಾರೆ.
1. ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿ ವ್ಯಕ್ತಿಯು ಕಡ್ಡಾಯವಾಗಿ ಮಾಸ್ಕ್ ಧರಿಸುವುದು
2. ಸಾರ್ವಜನಿಕ ಸ್ಥಳದಲ್ಲಿ ಒಂದು ಮೀಟರ್ ಅಂತರ ಪಾಲನೆ ಮಾಡಬೇಕು
3. ಯಾವುದೇ ಕಾರ್ಯಕ್ರಮಗಳಲ್ಲಿ ಗರಿಷ್ಠ 20 ಮಂದಿಯಷ್ಟೇ ಭಾಗವಹಿಸಲು ಅವಕಾಶ
Advertisement
Advertisement
ಸೋಂಕು ಹರಡುವಿಕೆ ತಡೆಯಲು ಮೂರು ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಕಮೀಷನರ್ ಆದೇಶ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಒಂದು ತಿಂಗಳು ನಿಷೇಧಾಜ್ಞೆ ಜಾರಿದ್ದಾರೆ. ಕೋವಿಡ್ ನಿಯಮಗಳ ಉಲ್ಲಂಘನೆಯಾದಲ್ಲಿ ಎನ್‍ಡಿಎಂಎ ಅಡಿಯಲ್ಲಿ ಕೇಸ್ ದಾಖಲಿಸುವ ಎಚ್ಚರಿಕೆ ನೀಡಿದ್ದಾರೆ.
Advertisement
ಯಾವುದೇ ವ್ಯಕ್ತಿ ಈ ಮೇಲಿನ ನಿಯಂತ್ರಣ ಕ್ರಮಗಳನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51 ರಿಂದ 60ರ ಜೊತೆಗೆ ಐಪಿಸಿ ಸೆಕ್ಷನ್ 188 ರೀತ್ಯಾ ಕಾನೂನು ಕ್ರಮ ಜರುಗಿಸಲಾಗುವುದು. ಈ ಪ್ರತಿಬಂಧಕಾಜ್ಞೆಯೂ ಜೂನ್ 26 ರಿಂದ ಜುಲೈ 26ರ ಮಧ್ಯರಾತಿ ವರೆಗೆ ಅಂದರೆ 30 ದಿನಗಳ ಅನ್ವಯವಾಗುತ್ತದೆ ಎಂದು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.