ಚಿಕ್ಕಬಳ್ಳಾಪುರ: ಗರ್ಭಿಣಿಯೊಬ್ಬರು ಗರ್ಭ ನಿರೋಧಕ ಮಾತ್ರೆ ಸೇವಿಸಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪು ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪೂಲವಾರಪಲ್ಲಿ ಎಂಬಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಶ್ರೀಕನ್ಯಾ(27) ಎಂದು ಗುರುತಿಸಲಾಗಿದೆ. ಈಕೆ ತನಗೆ ಮತ್ತೆ ಹೆಣ್ಣು ಮಗು ಆಗುತ್ತೆ ಎಂದು ಮನನೊಂದು ಮಾತ್ರೆಗಳನ್ನು ಸೇವಿಸಿ ಸಾವನ್ನಪ್ಪಿದ್ದಾರೆ.
ಶ್ರೀಕನ್ಯಾ ಅವರಿಗೆ ಈಗಾಗಲೇ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಹೀಗಾಗಿ ಮತ್ತೆ ಹೆಣ್ಣು ಮಗು ಬೇಡವೆಂದು ಮಾತ್ರೆಗಳನ್ನು ಸೇವಿಸಲು ನಿರ್ಧಾರ ಮಾಡಿದ್ದಾರೆ. ಅಂತೆಯೇ ಗರ್ಭ ನಿರೋಧಕ ಮಾತ್ರೆಗಳನ್ನು ತೆಗೆದುಕೊಂಡಿದ್ದಾರೆ. ಮಾತ್ರೆ ಸೇವಿಸಿದ ಕೂಡಲೇ ಅವರಿಗೆ ತೀವ್ರ ರಕ್ತಸ್ರಾವವಾಗಲು ಆರಂಭವಾಗಿದೆ. ಹೀಗಾಗಿ ತಕ್ಷಣ ಕುಟುಂಬಸ್ಥರು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಲ್ಲಿ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಮಹಿಳೆಗೆ ತನ್ನ ಹೊಟ್ಟೆಯಲ್ಲಿ ಹೆಣ್ಣು ಮಗುನೇ ಇದೆ ಎಂದು ಹೇಗೆ ಗೊತ್ತಾಯಿತು ಎಂಬುದು ಸದ್ಯ ಪ್ರಶ್ನೆಯಾಗಿದೆ. ಯಾಕಂದ್ರೆ ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ ನಿಷೇಧಿಸಲಾಗಿದೆ. ಹಾಗಿದ್ದರೂ ಶ್ರೀಕನ್ಯಾ ಅವರಿಗೆ ಹೆಣ್ಣು ಮಗುವಿನ ಸುಳಿವು ಸಿಕ್ಕಿದ್ದು ಹೇಗೆ ಅನ್ನೋದೇ ಕುತೂಹಲ.