ಬೆಂಗಳೂರು: ಚೀನಾ ಸೈನಿಕರ ವಿರುದ್ಧ ಹೋರಾಡಿ ಹುತಾತ್ಮರಾದ ಸೈನಿಕರ ತ್ಯಾಗ ಬಲಿದಾನಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಮನಗಳನ್ನು ಸಲ್ಲಿಸುವ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಭಾರತ ಚೀನಾ ಗಡಿಯ ಗಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಕೆಚ್ಚೆದೆಯಿಂದ ಹೋರಾಡಿ ಹುತಾತ್ಮರಾದ ನಮ್ಮ ವೀರ ಯೋಧರ ತ್ಯಾಗ ಬಲಿದಾನಕ್ಕೆ ಅನಂತ ನಮನಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಇಂತಹ ಕ್ಲಿಷ್ಟ ಸಂದರ್ಭವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಮರ್ಥವಾಗಿ ನಿಭಾಯಿಸಲಿದೆ ಎಂದು ಬರೆದುಕೊಂಡಿದ್ದಾರೆ.
Advertisement
ಭಾರತ ಚೀನಾ ಗಡಿಯ ಗಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಕೆಚ್ಚೆದೆಯಿಂದ ಹೋರಾಡಿ ಹುತಾತ್ಮರಾದ ನಮ್ಮ ವೀರ ಯೋಧರ ತ್ಯಾಗ ಬಲಿದಾನಕ್ಕೆ ಅನಂತ ನಮನಗಳು.
ಅವರ ಆತ್ಮಕ್ಕೆ ಶಾಂತಿ ಸಿಗಲಿ.
ಇಂತಹ ಕ್ಲಿಷ್ಟ ಸಂದರ್ಭವನ್ನು ಮಾನ್ಯ ಪ್ರಧಾನಿ ಶ್ರೀ @narendramodi ನೇತೃತ್ವದ ಕೇಂದ್ರ ಸರ್ಕಾರ ಸಮರ್ಥವಾಗಿ ನಿಭಾಯಿಸಲಿದೆ.1/2#Soldiers
— CM of Karnataka (@CMofKarnataka) June 16, 2020
Advertisement
ಪೂರ್ವ ಲಡಾಕ್‍ನ ಗಾಲ್ವಾನ್ ಕಣಿವೆಯಲ್ಲಿ ಚೀನಾದೊಂದಿಗೆ ನಡೆದ ಸಂಘರ್ಷದಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಅಷ್ಟೇ ಅಲ್ಲದೆ 17 ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಭಾರತೀಯ ಸೇನೆಯು ಖಚಿತಪಡಿಸಿದೆ.
Advertisement
2/2 ಭಾರತದ ಸೈನಿಕರಿಗೆ ನಮ್ಮೆಲ್ಲರ ನೈತಿಕ ಬೆಂಬಲ ಯಾವತ್ತೂ ಇರಲಿದೆ.
ಎಂದು ಮಾನ್ಯ ಮುಖ್ಯಮಂತ್ರಿ ಶ್ರೀ @BSYBJP ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.#IndianArmy
— CM of Karnataka (@CMofKarnataka) June 16, 2020
Advertisement
ಇತ್ತ ಚೀನಾ ದಾಳಿಗೆ ಪ್ರತ್ಯುತ್ತರ ನೀಡಿರುವ ಭಾರತೀಯ ಸೇನೆಯು ಅಲ್ಲಿನ 43 ಮಂದಿ ಯೋಧರನ್ನು ಸೆದೆಬಡಿದಿದೆ. ಅಷ್ಟೇ ಅಲ್ಲದೆ 100ಕ್ಕೂ ಹೆಚ್ಚು ಚೀನಾ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಮ್ಮ ಯೋಧರ ಮೃತದೇಹವನ್ನು ಹೊತ್ತೊಯ್ಯಲು ಚೀನಾ ಹೆಲಿಕಾಪ್ಟರ್ ಗಳು ಎಲ್‍ಎಸಿ ಬಳಿ ಹಾರಾಟ ನಡೆಸಿವೆ ಎಂದು ವರದಿಯಾಗಿದೆ.