– ಚಿಕ್ಕಬಳ್ಳಾಪುರ ಪೊಲೀಸರಿಂದ ಗಡಿಯಲ್ಲಿ ಅಲರ್ಟ್
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಗಾಂಜಾ ಮತ್ತಿನ ಗಮ್ಮತ್ತು ಜೋರಾಗಿ ಸದ್ದು ಮಾಡುತ್ತಿರುವುದರಿಂದ ಜಿಲ್ಲೆಯ ಆಂಧ್ರ ಪ್ರದೇಶದ ಗಡಿಭಾಗಗಳಲ್ಲಿ ಪೊಲೀಸ್ ಕಣ್ಗಾವಲು ಹಾಕಿದ್ದು, ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ವಾಹನಗಳನ್ನು ತಪಾಸಣೆ ನಡೆಸುವ ಕಾರ್ಯ ನಡೆಸುತ್ತಿದ್ದೇವೆ ಎಂದು ಚಿಕ್ಕಬಳ್ಳಾಪುರ ಎಸ್‍ಪಿ ಮಿಥುನ್‍ಕುಮಾರ್ ಹೇಳಿದ್ದಾರೆ.
Advertisement
ಇತ್ತೀಚೆಗೆ ಚಿಂತಾಮಣಿ ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮನೆ ಮೇಲೆ ದಾಳಿ ನಡೆಸಿ ಮೂವರನ್ನು ಬಂಧಿಸಲಾಗಿದೆ. ಘಟನೆಯಿಂದ ಎಚ್ಚೆತ್ತಿರುವ ಜಿಲ್ಲೆಯ ಪೊಲೀಸರು ಅಕ್ರಮ ಗಾಂಜಾ ಸಾಗಾಣಿಕೆ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳ ಮೇಲೆ ಸೂಕ್ಷ್ಮ ನಿಗಾ ವಹಿಸಿದ್ದು ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಯ ಸಂಪರ್ಕಿತ ರಸ್ತೆಗಳಲ್ಲಿ ಚೆಕ್ ಪೋಸ್ಟ್ ಗಳನ್ನ ಅಳವಡಿಸಿ ತಪಾಸಣೆ ನಡೆಸುತ್ತಿದ್ದಾರೆ. ಅಲ್ಲದೇ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಆಂಧ್ರಪ್ರದೇಶದ ಅನಂತಪುರ, ಚಿತ್ತೂರು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಸಂಪರ್ಕ ಹೊಂದಿದ್ದು, ಗಾಂಜಾ ಸೇರಿದಂತೆ ಅಕ್ರಮ ಚಟುವಟಿಕೆಗಳ ಮೇಲೆ ಜಿಲ್ಲಾ ಪೊಲೀಸ್ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದೇವೆ ಎಂದರು. ಇದನ್ನೂ ಓದಿ: ನಂದಿಗಿರಿಧಾಮ ಲಾಕ್‍ಡೌನ್ ಮುಕ್ತಾಯ – ಸೆ.7ರಿಂದ ಪ್ರವಾಸಿಗರ ಪ್ರವೇಶಕ್ಕೆ ಅನುಮತಿ
Advertisement
Advertisement
ಸದ್ಯ ಗಾಂಜಾ, ಶ್ರೀಗಂಧ, ರಕ್ತ ಚಂದನ ಸೇರಿದಂತೆ ಮತ್ತಿತರ ಅಕ್ರಮ ಚಟುವಟಿಕೆಗಳ ಆರೋಪಿಗಳ ಚಲನವಲನಗಳನ್ನು ಗಮನಿಸುತ್ತಿದ್ದು, ಈಗಾಗಲೇ ಎಚ್ಚರಿಕೆಯನ್ನು ಸಹ ನೀಡಲಾಗಿದೆ. ಗಾಂಜಾ ಪ್ರಕರಣಗಳನ್ನ ಪತ್ತೆ ಹಚ್ಚುವಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಒಂದು ವೇಳೆ ಕರ್ತವ್ಯ ಲೋಪ ಕಂಡು ಬಂದರೆ ಸಂಬಂಧಿಸಿದವರ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗಿಸುವುದಾಗಿ ಎಚ್ಚರಿಸಿದರು.