ಬೆಂಗಳೂರು: ನಗರದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆಂಧ್ರ ಪ್ರದೇಶ ಮೂಲದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಹೊಸಕೋಟೆ ಪೊಲೀಸರು ಯಶಸ್ವಿಯಾಗಿದ್ದಾರೆ.
Advertisement
ಗಾಂಜಾ ಮಾರಾಟ ಹೊಸಕೋಟೆ ಸುತ್ತ ಮುತ್ತಲಿನ ಪ್ರದೇಶದಲ್ಲಿ ಬಹಳಷ್ಟು ವ್ಯಾಪಾರವಾಗುತ್ತಿತ್ತು. ಇದರಿಂದಾಗಿ ಎಲ್ಲೆಡೆ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದರು. ಅದೇ ರೀತಿ ಕಳೆದ ರಾತ್ರಿ ಪೊಲೀಸ್ ಇನ್‍ಸ್ಪೆಕ್ಟರ್ ರಂಗಸ್ವಾಮಿ ರೌಂಡ್ಸ್ ನಲ್ಲಿದ್ದ ವೇಳೆ ಮೂವರು ಅನುಮಾನಾಸ್ಪದ ವ್ಯಕ್ತಿಗಳು ಓಡಾಡುತ್ತಿರುವುದು ಕಂಡುಬಂದಿದೆ. ಅವರನ್ನು ಹಿಡಿದು ವಿಚಾರಣೆ ಮಾಡಿದಾಗ ಗಾಂಜಾ ಮಾರಾಟ ಪ್ರಕರಣ ಬೆಳಕಿಗೆ ಬಂದಿದ್ದು, ಗಾಂಜಾ ಮಾರಾಟ ಮಾಡಲು ಆಂಧ್ರಪ್ರದೇಶದಿಂದ ಬಂದಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ಆಡುವಾಗ ಗಣೇಶ ಮೂರ್ತಿ ನುಂಗಿದ ಮೂರು ವರ್ಷದ ಮಗು
Advertisement
Advertisement
ಆರೋಪಿಗಳನ್ನು ಆಂಧ್ರಪ್ರದೇಶದ ರಾಜು, ಶಿವ ನಾಗೇಶ್ವರ್, ಜಗದೀಶ್ ಎಂದು ಗುರುತಿಸಲಾಗಿದ್ದು ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 23 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ. ಆರೋಪಿಗಳು ಆಂಧ್ರಪ್ರದೇಶದಿಂದ ಇಲ್ಲಿಗೆ ಯಾರಿಗೆ ವ್ಯಾಪಾರ ಮಾಡಲು ಬಂದಿದ್ದರು? ಎಲ್ಲಿಂದ ಬಂದಿದ್ದರು? ಗಾಂಜಾ ದೊರೆಯುವ ಪ್ರದೇಶದ ಕುರಿತು ಪೊಲೀಸರು ವಿಚಾರಣೆ ಕೈಗೆತ್ತಿಕೊಂಡಿದ್ದು ಆರೋಪಿಗಳ ವಿರುದ್ಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ ತನಿಖೆ ಮುಂದುವರಿಸಿದ್ದಾರೆ.
Advertisement