ಬೆಂಗಳೂರು: ಸಿದ್ದರಾಮಯ್ಯ ಅಲ್ಪಸಂಖ್ಯಾತರ ಟರ್ಮಿನೇಟರ್ ಎಂದಿದ್ದ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ವಿರುದ್ಧ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಈ ವಿಚಾರವಾಗಿ ಸಿದ್ದರಾಮಯ್ಯ ಅವರು ತಮ್ಮ ಟ್ವೀಟರ್ನಲ್ಲಿ, ಮಹಾತ್ಮ ಗಾಂಧೀಜಿ ಅವರನ್ನು ಹಿಂದೂ ವಿರೋಧಿ ಎನ್ನುತ್ತಿದ್ದ ಹಿಂದೂಗಳು, ದಲಿತ ವಿರೋಧಿ ಎನ್ನುತ್ತಿದ್ದ ದಲಿತರು, ಮುಸ್ಲಿಂ ವಿರೋಧಿ ಎನ್ನುತ್ತಿದ್ದ ಮುಸ್ಲಿಂರು ಇದ್ದರು. ಮಹಾತ್ಮರ ಬೆನ್ನು ಬಿಡದ ಟೀಕಾಕಾರರು, ನನ್ನಂತಹ ಹುಲುಮಾನವರನ್ನು ಬಿಡುತ್ತಾರೆಯೇ? ಸಬ್ ಕೋ ಸನ್ಮತಿ ದೇ ಭಗವಾನ್ ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ನಿಮ್ಮ ಅಂತ್ಯಕಾಲವೂ ಆರಂಭವಾಗಿದೆ – ಸಿದ್ದರಾಮಯ್ಯ ವಿರುದ್ಧ ಹೆಚ್‍ಡಿಕೆ ಟ್ವೀಟ್ ವಾರ್
ಮಹಾತ್ಮ ಗಾಂಧೀಜಿ ಅವರನ್ನು
ಹಿಂದೂ ವಿರೋಧಿ ಎನ್ನುತ್ತಿದ್ದ ಹಿಂದೂಗಳು,
ದಲಿತ ವಿರೋಧಿ ಎನ್ನುತ್ತಿದ್ದ ದಲಿತರು,
ಮುಸ್ಲಿಮ್ ವಿರೋಧಿ ಎನ್ನುತ್ತಿದ್ದ ಮುಸ್ಲಿಮರು ಇದ್ದರು.
ಮಹಾತ್ಮರ ಬೆನ್ನು ಬಿಡದ ಟೀಕಾಕಾರರು
ನನ್ನಂತಹ ಹುಲುಮಾನವರನ್ನು ಬಿಡುತ್ತಾರೆಯೇ?
ಸಬ್ ಕೋ ಸನ್ಮತಿ ದೇ ಭಗವಾನ್.#MahatmaGandhiji
— Siddaramaiah (@siddaramaiah) October 17, 2021
ಮಾಜಿ ಸಿಎಂ ಹೆಚ್‍ಡಿ. ಕುಮಾರಸ್ವಾಮಿ ಅವರು ನಿನ್ನೆ, ಅಲ್ಪಸಂಖ್ಯಾತರ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೋಸು ಕೊಡುವ ‘ಸಿದ್ದಹಸ್ತ’ ಶೂರನ ನಿಜಬಣ್ಣ ಬಯಲು ಮಾಡುವ ಸಂದರ್ಭ ಬಂದಿದೆ. ಸ್ವಾರ್ಥ, ಸ್ವಜನ ಪಕ್ಷಪಾತ, ತಮ್ಮ ಬೆಂಬಲಿಗರ ರಾಜಕೀಯ ಅಭಿವೃದ್ಧಿಗಾಗಿ ಪಕ್ಷಕ್ಕಾಗಿ ಅಹರ್ನಿಷಿ ದುಡಿದ ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗುತ್ತಿದೆ. ತನ್ನೆಲ್ಲ ಸಿದ್ದಕಲೆ, ಸಿದ್ದಸೂತ್ರಗಳೆನ್ನೆಲ್ಲ ಪೋಣಿಸಿ ‘ಅಹಿಂದ’ ಎಂದು ಜನರನ್ನು ಅಡ್ಡದಾರಿ ಹಿಡಿಸಿದ ‘ಸಿದ್ದಹಸ್ತ ಶೂರರು’ ತಮ್ಮ ಸ್ವಪಕ್ಷದಲ್ಲೇ ಮುಸ್ಲಿಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಟಾರ್ಗೆಟ್ ಮಾಡುತ್ತಾ ಅಲ್ಪಸಂಖ್ಯಾತರ ಅಂತ್ಯ ರಾಜಕಾರಣದ ಟರ್ಮಿನೇಟರ್ ಆಗಿ ಹೊರಹೊಮ್ಮಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದರು. ಇದನ್ನೂ ಓದಿ: ಕುಮಾರಸ್ವಾಮಿ ಮಾತು ವೇದವಾಕ್ಯ ಅಲ್ಲ: ಸಿದ್ದರಾಮಯ್ಯ