ಶ್ರೀನಗರ: ಉಗ್ರರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿ ವೇಳೆ ಮೂವರು ಉಗ್ರರನ್ನು ಭದ್ರತಾ ಸಿಬ್ಬಂದಿ ಸದೆಬಡಿದಿದ್ದಾರೆ.
#UPDATE All three terrorists killed in Anantnag encounter: IGP Kashmir Vijay Kumar #JammuAndKashmir pic.twitter.com/u6CMeD6fP0
— ANI (@ANI) May 11, 2021
ಜಮ್ಮು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ವೈಲೂ ಹಾಗೂ ಕೊಕರ್ನಾಗ್ ಪ್ರದೇಶದಲ್ಲಿ ಗುಂಡಿನ ಚಕಮಕಿ ಇನ್ನೂ ನಡೆಯುತ್ತಿದೆ. ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಇಂದು ಬೆಳಗಿನಜಾವ ಭದ್ರತಾ ಸಿಬ್ಬಂದಿ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಗುಂಡಿನ ಚಕಮಕಿ ವೇಳೆ ಮೂವರು ಎಲ್ಇಟಿ ಉಗ್ರರನ್ನು ಸದೆಬಡಿಯಲಾಗಿದೆ ಎಂದು ಕಾಶ್ಮೀರ ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.
ಆರಂಭದಲ್ಲಿ ಭದ್ರತಾ ಸಿಬ್ಬಂದಿ ಉಗ್ರರಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಬಳಿಕ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಸಿಬ್ಬಂದಿ ಸಹ ಗುಂಡು ಹಾರಿಸಿದ್ದಾರೆ. ಈ ವೇಳೆ ಮೂವರು ಉಗ್ರರು ಹತರಾಗಿದ್ದಾರೆ ಎಂದು ತಿಳಿಸಿದ್ದಾರೆ.