ಗಾಂಧೀನಗರ: 9ನೇ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕವಾಗಿ ಶೇ.50ರಷ್ಟು ಆಸನ ವ್ಯವಸ್ಥೆಯೊಂದಿಗೆ ಜುಲೈ 26ರಿಂದ ಶಾಲೆ ತೆರೆಯಲು ಗುಜರಾತ್ ಸರ್ಕಾರ ಅನುಮತಿ ನೀಡಿದೆ.
Advertisement
ಈ ಕುರಿತು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದಾರೆ. ಶಾಲೆಯಲ್ಲಿ ದೈಹಿಕ ಶಿಕ್ಷಣ ತರಗತಿಗೆ ಹಾಜರಾಗಲು ಸಿದ್ಧರಿರುವ ವಿದ್ಯಾರ್ಥಿಗಳ ಪೋಷಕರು ಒಪ್ಪಿಗೆ ಪತ್ರಕ್ಕೆ ಸಹಿ ಮಾಡಿ ಸಲ್ಲಿಸಬೇಕಾಗುತ್ತದೆ.
Advertisement
Advertisement
ಈ ದೈಹಿಕ ಶಿಕ್ಷಣ ತರಗತಿಗೆ ಹಾಜರಿ ಕಡ್ಡಾಯವಾಗಿಲ್ಲವಾದರೂ, ಆನ್‍ಲೈನ್ ಶಿಕ್ಷಣ ಎಂದಿನಂತೆ ಮುಂದುವರಿಯಲಿದೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಕೋವಿಡ್-19 ನಿಯಮಗಳ ಅನುಸಾರ ಶಾಲೆಗಳನ್ನು ತೆರೆಯಲಾಗಿದ್ದು, ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ.
Advertisement
ಕಳೆದ ವಾರ ಕೊರೊನಾ ವೈರಸ್ ಪ್ರಕರಣದಲ್ಲಿ ಇಳಿಕೆ ಕಂಡಿದ್ದು, ಶಾಲೆಗಳು, 12ನೇ ತರಗತಿ, ಕಾಲೇಜುಗಳು ಹಾಗೂ ತಾಂತ್ರಿಕ ಸಂಸ್ಥೆಗಳನ್ನು ಪುನಃ ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಗುಜರಾತ್‍ನಲ್ಲಿ ಗುರುವಾರ 34 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸಾವಿನಕ್ಕೆ ಶೂನ್ಯವಾಗಿದೆ. ಇದನ್ನೂ ಓದಿ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಮಂಗಳೂರಿನ ವಿನಂತಿ ಹರಿಕಾಂತ