– ಗೃಹ ಇಲಾಖೆಯ ಜೊತೆ ಸಿಎಂ ಬಿಎಸ್‌ವೈ ಸಭೆ
– 3 ಮಂದಿ ಸರ್ಕಾರಿ ಅಭಿಯೋಜಕರನ್ನು ನೇಮಿಸಿ
ಬೆಂಗಳೂರು: ದೇವರಜೀವನಹಳ್ಳಿ ಹಾಗೂ ಕಾಡುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೂಂಡಾ ಕಾಯ್ದೆಯ ಅಡಿ ಯಾರನ್ನು ಬಂಧಿಸಬಹುದು ಅವರನ್ನು ಬಂಧಿಸಿ ಎಂದು ಸಿಎಂ ಯಡಿಯೂರಪ್ಪ ಗೃಹ ಇಲಾಖೆಗೆ ಸೂಚಿಸಿದ್ದಾರೆ.
ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಸಭೆಯ ಬಳಿಕ ಮಾತನಾಡಿದ ಬೊಮ್ಮಾಯಿ, ಸಂಪೂರ್ಣ ಮಾಹಿತಿಯನ್ನು ಸಿಎಂಗೆ ನೀಡಿದ್ದೇವೆ. ದಂಗೆಯಲ್ಲಿ ಭಾಗವಹಿಸಿದವರಿಂದ ನಷ್ಟ ಭರ್ತಿಗೆ ಸಿಎಂ ಸೂಚಿಸಿದ್ದಾರೆ. ಗಲಭೆಯಲ್ಲಿ ಪಾಲ್ಗೊಂಡವರ ಹಿನ್ನೆಲೆ ಪರಿಶೀಲಿಸಿ ಗೂಂಡಾ ಕಾಯ್ದೆಯಡಿ ಬಂಧಿಸುವುದಕ್ಕೆ ಸಿಎಂ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.
Advertisement
Advertisement
ಮೂರು ಜನ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಗಳನ್ನು ನೇಮಿಸಲು ಸಿಎಂ ಸೂಚನೆ ಕೊಟ್ಟಿದ್ದಾರೆ. ಕಾನೂನು ಬಾಹಿರ ಚಟುವಟಿಕೆಗಳ ನಿರ್ಬಂಧ ಕಾಯ್ದೆಯ ಅಡಿಯೂ ಕ್ರಮ ಕೈಗೊಳ್ಳಲು ಸಿಎಂ ಸೂಚಿಸಿದ್ದಾರೆ ಎಂದು ಹೇಳಿದರು.
Advertisement
ಗಲಭೆಯಲ್ಲಿ ಪಾಲ್ಗೊಂಡ ಆರೋಪಿಗಳ ಹಿನ್ನೆಲೆ, ಯಾವ ಸಂಘಟನೆಗಳ ಜೊತೆ ಸಂಪರ್ಕ ಇದೆ? ಆರೋಪಿಗಳು ಉಗ್ರ ಸಂಘಟನೆಗಳ ಜತೆಗೂ ಲಿಂಕ್ ಇಟ್ಕೊಂಡಿದ್ದಾರಾ ಎಂಬುದರ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ನವೀನ್ ವಿರುದ್ಧ ದೂರು ನೀಡಿದ್ಧ ವ್ಯಕ್ತಿಯಿಂದ ಈಗ ಗಲಭೆಕೋರರ ವಿರುದ್ಧ ದೂರು
Advertisement
ಸಭೆಯಲ್ಲಿ ಗೃಹ ಸಚಿವ @BSBommai, ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಗೃಹ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಡಿಜಿ-ಐಜಿಪಿ ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಉಪಸ್ಥಿತರಿದ್ದರು. (2/2) pic.twitter.com/qKAPpxEzvO
— CM of Karnataka (@CMofKarnataka) August 17, 2020
ಗಲಭೆಕೋರರಿಗೆ ಉಗ್ರರ ನಂಟಿನ ಬಗ್ಗೆ ಕೇಳಲಾದ ಪ್ರಶ್ನೆಗೆ, ಇನ್ನೂ ತನಿಖೆ ಹಂತದಲ್ಲಿ ಇದೆ. ಯಾವ ಸಂಘಟನೆಯ ಜೊತೆ ಸಂಪರ್ಕದಲ್ಲಿದೆ ಎನ್ನುವುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಇದರ ಬಗ್ಗೆ ಹೇಳಲು ಆಗುವುದಿಲ್ಲ ಎಂದು ಉತ್ತರಿಸಿದರು.
ಸಭೆಯಲ್ಲಿ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಗೃಹ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಡಿಜಿ-ಐಜಿಪಿ ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಉಪಸ್ಥಿತರಿದ್ದರು.
ಸಿಎಂ ಸಭೆಯ ಹೈಲೈಟ್ಸ್:
1. ಆರೋಪಿಗಳ ತ್ವರಿತ ವಿಚಾರಣೆಗಾಗಿ, ಕಾನೂನು ಪ್ರಕ್ರಿಯೆಗಳಿಗಾಗಿ ಮೂವರು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಗಳ ನೇಮಕ.
2. ಗಲಭೆಯಡಿ ಬಂಧಿಸಿರುವ ಆರೋಪಿಗಳ ಜತೆ ಉಗ್ರ ಸಂಘಟನೆಗಳ ಲಿಂಕ್ ಇದ್ಯಾ ಅನ್ನೋ ಬಗ್ಗೆ ಬಗ್ಗೆ ಪರಿಶೀಲನೆಗೆ ನಿರ್ಧಾರ.
3. ಘಟನೆಯಿಂದ ಆಗಿರುವ ಆಸ್ತಿಪಾಸ್ತಿ ನಷ್ಟ ವಸೂಲಿಗೆ ಕ್ಲೇಂ ಕಮೀಷನರ್ ನೇಮಕ ಮಾಡುವಂತೆ ಹೈಕೋರ್ಟ್ ಗೆ ಮನವಿ ಸಲ್ಲಿಕೆಗೆ ನಿರ್ಧಾರ.
4. ಪ್ರಕರಣದಲ್ಲಿ ಭಾಗಿಯಾದವರ ಮೇಲೆ ಹಿಂದೆ ಕೇಸ್ ಇದ್ದರೆ ಪರಿಶೀಲಿಸಿ ಅಂತಹವರ ಮೇಲೆ ಗೂಂಡಾ ಕಾಯ್ದೆಯ ಅಡಿ ಹಾಕಲು ನಿರ್ಧಾರ.
5. ಪ್ರಕರಣದಲ್ಲಿ ಭಾಗಿಯಾದವರು ಇತರೇ ಸಂಘಟನೆಗಳ ಜೊತೆ ಗುರ್ತಿಸಿಕೊಂಡಿರುವ ಬಗ್ಗೆ ಪರಿಶೀಲನೆ.
6. ಪ್ರಕರಣದ ಹಿಂದಿರುವ ರಾಜಕೀಯ ಕಾರಣಗಳ ಬಗ್ಗೆಯೂ ಪರಿಶೀಲನೆ.
7. ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದ ಒಂದೇ ತನಿಖಾ ತಂಡದಿಂದ ಮಾತ್ರ ಸದ್ಯಕ್ಕೆ ತನಿಖೆ. ಇದರಲ್ಲೂ ಸದ್ಯಕ್ಕೆ ಬದಲಾವಣೆ ಇಲ್ಲ.
8. ಗೋಲಿಬಾರ್ ಪ್ರಕರಣವೂ ಜಿಲ್ಲಾ ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ. ಇದರಲ್ಲಿ ಬದಲಾವಣೆ ಇಲ್ಲ.
9. ಆರೋಪಿಗಳ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ನಿರ್ಬಂಧ ಕಾಯ್ದೆಯಡಿಯೂ ಕ್ರಮ ಕೈಗೊಳ್ಳಲು ಸಿಎಂ ಸೂಚನೆ