ನವದೆಹಲಿ: ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೊರೊನಾ ಲಕ್ಷಣಗಳು ಕಂಡು ಬಂದ ಹಿನ್ನಲೆ ಟೆಸ್ಟ್ ಮಾಡಿಸಲಾಗಿತ್ತು. ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದಿದೆ ಎಂದು ಹೇಳಿದ್ದಾರೆ.
ನಾನು ಆರೋಗ್ಯವಾಗಿದ್ದೇವೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆ ದಾಖಲಾಗುತ್ತಿದ್ದೇನೆ. ತಮ್ಮ ಸಂಪರ್ಕ ಬಂದವರು ಐಸೂಲೇಷನ್ ಆಗುವಂತೆ ಅಮಿತ್ ಶಾ ಟ್ವಿಟ್ಟರ್‌ನಲ್ಲಿ ಮನವಿ ಮಾಡಿದ್ದಾರೆ.
कोरोना के शुरूआती लक्षण दिखने पर मैंने टेस्ट करवाया और रिपोर्ट पॉजिटिव आई है। मेरी तबीयत ठीक है परन्तु डॉक्टर्स की सलाह पर अस्पताल में भर्ती हो रहा हूँ। मेरा अनुरोध है कि आप में से जो भी लोग गत कुछ दिनों में मेरे संपर्क में आयें हैं, कृपया स्वयं को आइसोलेट कर अपनी जाँच करवाएं।
— Amit Shah (@AmitShah) August 2, 2020
ಕೊರೊನಾ ಸೋಂಕಿತರ ಪೈಕಿ ದೇಶದಲ್ಲಿ ಒಟ್ಟು 11,45,629(ಶೇ.65.44) ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 5,67,730(ಶೇ.33.43) ಸಕ್ರಿಯ ಪ್ರಕರಣಗಳಿದ್ದು, 37,364(ಶೇ.2.13) ಮಂದಿ ಮೃತಪಟ್ಟಿದ್ದಾರೆ.
ಸರ್ಕಾರದ ವರದಿ ಪ್ರಕಾರ ಜೂನ್ 18ಕ್ಕೆ ಶೇ.3.33 ರಷ್ಟಿದ್ದರೆ ಜುಲೈ 10ಕ್ಕೆ ಶೇ.2.72ಕ್ಕೆ ಇಳಿಕೆಯಾಗಿತ್ತು. ಆಗಸ್ಟ್ 1 ರಂದು ಶೇ.2.15ರಷ್ಟಿದ್ದರೆ ಆಗಸ್ಟ್ 2 ರಂದು ಶೇ.2.13ರಕ್ಕೆ ಮರಣ ಪ್ರಮಾಣ ಇಳಿಕೆಯಾಗಿದೆ.