ಮುಂಬೈ: ಬಾಲಿವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಕಪೂರ್ ಎನ್‍ಸಿಬಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಬೆಳಗ್ಗೆ 11.10ಕ್ಕೆ ಎನ್‍ಸಿಬಿ ಕಚೇರಿ ಆಗಮಿಸಿದ ನಟನನ್ನ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಇದಕ್ಕೂ ಮುನ್ನ ಗುರುವಾರ ತಡರಾತ್ರಿ ರಾಂಪಾಲ್ ಗೆಳೆಯ ಪಾಲ್ ಬಾರ್ಟೆಲ್ ನನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಗುರುವಾರ ವಿಚಾರಣೆಗೆ ಹಾಜರಾಗಿದ್ದ ಪಾಲ್ 10 ಗಂಟೆಯ ಬಳಿಕ ಅಧಿಕಾರಿಗಳು ಬಂಧಿಸುವ ಮೂಲಕ ಶಾಕ್ ನೀಡಿದ್ದರು. ಬಂಧಿತ ಪಾಲ್ ಆಸ್ಟ್ರೇಲಿಯಾ ಮೂಲಕ ಆರ್ಕಿಟೆಕ್ಟ್ ಆಗಿದ್ದು, ರಾಂಪಾಲ್ ಆಯೋಜನೆಯ ಪಾರ್ಟಿಗಳಲ್ಲಿ ಭಾಗಿಯಾಗುತ್ತಿದ್ದರು. ಇಂದು ಅರ್ಜುನ್ ರಾಂಪಾಲ್ ಮತ್ತು ಪಾಲ್ ಇಬ್ಬರು ಮುಖಾಮುಖಿಯಾಗಿ ಕೂರಿಸಿ ಪ್ರಶ್ನೆ ಕೇಳುವ ಸಾಧ್ಯತೆಗಳಿವೆ. ಬುಧವಾರ ಮತ್ತು ಗುರುವಾರ (ನವೆಂಬರ್ 11 ಮತ್ತು 12)ಎನ್‍ಸಿಬಿ ಅಧಿಕಾರಿಗಳ ಮುಂದೆ ರಾಂಪಾಲ್ ಗೆಳತಿ ಗ್ಯಾಬ್ರಿಯೆಲಾ ಹಾಜರಾಗಿದ್ದರು.
ನವೆಂಬರ್ 9ರಂದು ಮುಂಬೈನ ಬಾಂದ್ರಾ ನಿವಾಸದ ಮೇಲೆ ಎನ್‍ಸಿಬಿ ಅಧಿಕಾರಿಗಳು ನಡೆಸಿದ್ದರು. ಈ ವೇಳೆ ನಿಷೇಧಿತ ಮಾತ್ರೆಗಳು (ಡ್ರಗ್ಸ್) ಲಭ್ಯವಾಗಿರುವ ಬಗ್ಗೆ ವರದಿಯಾಗಿದೆ. ಮನೆಯಲ್ಲಿ ಸಿಕ್ಕ ವಸ್ತುಗಳ ಬಗ್ಗೆ ಅರ್ಜುನ್ ರಾಂಪಾಲ್ ಮತ್ತು ಗೆಬ್ರಿಯೆಲಾ ಸಮರ್ಪಕ ಉತ್ತರ ನೀಡದ ಹಿನ್ನೆಲೆ ಎನ್‍ಸಿವಿ ಸಮನ್ಸ್ ನೀಡಿ ವಿಚಾರಣೆಗೆ ಒಳಪಡಿಸುತ್ತಿದೆ. ಮನೆಯಲ್ಲಿ ಲಭ್ಯವಾಗಿರುವ ನಿಷೇಧಿತ ನಶೆ ಮಾತ್ರೆಗಳು ಹೇಗೆ ಬಂತು ಎಂಬುದರ ಕುರಿತು ರಾಂಪಾಲ್ ಉತ್ತರ ನೀಡಿಲ್ಲ ಎನ್ನಲಾಗಿದೆ. ದಾಳಿ ವೇಳೆ ಮೊಬೈಲ್ ಮತ್ತು ಲ್ಯಾಪ್‍ಟಾಪ್ ಸಹ ವಶಕ್ಕೆ ಪಡೆಯಲಾಗಿದೆ.
Mumbai: Actor Arjun Rampal arrives at Narcotics Control Bureau (NCB)
NCB had conducted a raid at his premises on November 9. pic.twitter.com/CrM5NqvvxD
— ANI (@ANI) November 13, 2020
ಕೆಲ ದಿನಗಳ ಹಿಂದೆ ಗೆಬ್ರಿಯೆಲಾ ಸೋದರ ಅಗಿಸಿಲಾಓಸ್ ನನ್ನು ಪುಣೆಯ ಲೋನಾವಾಲಾ ಬಳಿ ಬಂಧಿಸಲಾಗಿತ್ತು. ಬಂಧಿತ ಅಗಿಸಿಲಾಓಸ್ ಬಾಲಿವುಡ್ ಅಂಗಳದ ಡ್ರಗ್ಸ್ ಪ್ರಕರಣದ ಪ್ರಮುಖ ಆರೋಪಿ ಎಂದು ಹೇಳಲಾಗ್ತಿದೆ. ಅಗಿಸಿಲಾಓಸ್ ಪೆಡ್ಲರ್ ಗಳಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿರುವ ಆರೋಪ ಸಹ ಕೇಳಿ ಬಂದಿದೆ. ಮೃತ ಸುಶಾಂತ್ ಸಿಂಗ್ ರಜಪೂತ್ ಗೆಳತಿ ರಿಯಾ ಚಕ್ರವರ್ತಿ ಮತ್ತು ಶೌವಿಕ್ ಜೊತೆ ಅಗಿಸಿಲಾಓಸ್ ನಿರಂತರ ಸಂಪರ್ಕದಲ್ಲಿದ್ದ ಮಾಹಿತಿ ಲಭ್ಯವಾದ ಹಿನ್ನೆಲೆ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
NCB officials leave actor Arjun Rampal's premises in Mumbai, #Maharashtra https://t.co/oTy1kHHDz4 pic.twitter.com/sWvuildv8d
— ANI (@ANI) November 9, 2020