– ಲೋಕಕಲ್ಯಾಣಕ್ಕಾಗಿ ಬಿಜೆಪಿ ರಾಜ್ಯಾಧ್ಯಕ್ಷರಿಂದ ಪೂಜೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಗೋಕರ್ಣದ ಮಹಾಬಲೇಶ್ವರ ದೇವಾಲಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗಮಿಸಿ ಆತ್ಮ ಲಿಂಗಕ್ಕೆ ವಿಶೇಷ ಪೂಜೆ ನೆರವೇರಿಸಿದರು.
ಗ್ರಾಮಪಂಚಾಯಿತಿ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲಾ ಪ್ರವಾಸ ಮಾಡುತ್ತಿರುವ ನಳಿನ್ ಕುಮಾರ್ ಕಟೀಲ್, ಹುಬ್ಬಳ್ಳಿ ಯಿಂದ ಕುಮಟಾಕ್ಕೆ ಆಗಮಿಸಿದ್ದರು. ಈ ವೇಳೆ ಗೋಕರ್ಣಕ್ಕೆ ತೆರಳಿದ ಅವರು, ಲೋಕ ಕಲ್ಯಾಣಾರ್ಥವಾಗಿ ಗಂಗಾ ಜಲಾಭಿಷೇಕ, ಅರ್ಚನೆ ಮಾಡಿ ಮಹಾಬಲೇಶ್ವರನಲ್ಲಿ ಪ್ರಾರ್ಥಿಸಿದರು.
ದೇವಾಲಯದ ಆಡಳಿತಾಧಿಕಾರಿಗಳಾದ ಜಿ.ಕೆ.ಹೆಗಡೆ ಸಂಸದರನ್ನು ಸ್ವಾಗತಿಸಿದರು. ವೇ.ಅಮೃತೇಶ ಭಟ್ ಹಿರೇ ಮತ್ತು ಉಪಾಧಿವಂತ ಮಂಡಳಿಯವರು ಪೂಜಾ ಕೈಂಕರ್ಯ ನೆರವೇರಿಸಿದರು. ನಂತರ ಶ್ರೀ ದೇವಾಲಯದ ವತಿಯಿಂದ ಸನ್ಮಾನಿಸಲಾಯಿತು.