ಬೆಂಗಳೂರು: ಗುಜರಿ ವಸ್ತುಗಳನ್ನು ಸಂಗ್ರಹಿಸುತ್ತಿದ್ದ ಗೋಡಾನ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಮೈಸೂರು-ಬೆಂಗಳೂರು ರಸ್ತೆಯ ನಾಯಂಡಹಳ್ಳಿ ಬಳಿ ನಡೆದಿದೆ.
ನಾಯಂಡಹಳ್ಳಿ ಮೆಟ್ರೋ ಸ್ಟೇಷನ್ ಸಮೀಪದ ಗೋಡಾನ್ ನಲ್ಲಿ ರಾತ್ರಿ ಸುಮಾರು 10.30ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅವಘಡ ಸಂಭವಿಸಿದ ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಗಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆರು ಅಗ್ನಿಶಾಮಕದಳದ ವಾಹನಗಳು ಹಾಗೂ 45 ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.
ಪ್ಲಾಸ್ಟಿಕ್ ಫ್ಯಾಕ್ಟರಿ ಅಥವಾ ಗೋಡಾನ್ ಫಾಜಿಲ್ ಎಂಬವರಿಗೆ ಸೇರಿದ್ದಾಗಿದೆ. ಪ್ಲಾಸ್ಟಿಕ್ ಕಾರ್ಖಾನೆ ಕ್ಲೋಸ್ ಆಗಿದ್ದ ಕಾರಣ ತಪ್ಪಿದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗುತ್ತಿದೆ.