ಬೀದರ್: ಜುಲೈ 21 ರಂದು ಆಚರಿಸುತ್ತಿರುವ ಬಕ್ರೀದ್ ಹಬ್ಬ ಹಾಗೂ ಮತ್ತಿತರೆ ಸಂದರ್ಭಗಳಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಅವರು ಅಧಿಕಾರಿಗಳಿ ಸೂಚನೆ ನೀಡಿದ್ದಾರೆ.
Advertisement
ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಗೋವನ್ನು ಮಾತೆ ಎಂದು ಕರೆಯಲಾಗುತ್ತದೆ ಮತ್ತು ಪೂಜಿಸಲಾಗುತ್ತದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿರುವುದರಿಂದ ಬಕ್ರೀದ್ ಹಬ್ಬದ ಆಚರಣೆ ಸಂದರ್ಭದಲ್ಲಿ ದನ, ಕರುಗಳು ಹಾಗೂ 13 ವರ್ಷದೊಳಗಿನ ಎಮ್ಮೆ ಮತ್ತು ಕೋಣಗಳನ್ನು ಅನಧಿಕೃತವಾಗಿ ವಧೆ ಮಾಡುವುದು ಹಾಗೂ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಣಿಕೆ ಮಾಡುವಂತಿಲ್ಲ. ಹಾಗಾಗಿ ಜಿಲ್ಲೆಯಲ್ಲಿ ಕಾಯ್ದೆಯ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಎಸಿಬಿ ದಾಳಿ – 15 ಲಕ್ಷ ನಗದು, 750 ಗ್ರಾಂ ಚಿನ್ನ, ಅಪಾರ ಆಸ್ತಿ ಪತ್ರ ಪತ್ತೆ
Advertisement
Advertisement
ಜಾನುವಾರುಗಳ ಸಂರಕ್ಷಣೆಗಾಗಿ ಜಾರಿಗೆ ತಂದಿರುವ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು. ಪಶುಪಾಲನೆ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ಹಾಗೂ ಎಲ್ಲ ತಾಲೂಕುಗಳ ಸಹಾಯಕ ನಿರ್ದೇಶಕರು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಜಿಲ್ಲೆಯಿಂದ ಯಾವೊಂದು ಗೋವು ಕಸಾಯಿಖಾನೆಗೆ ಹೋಗದಂತೆ ಪೊಲೀಸ್ ಇಲಾಖೆ ಎಚ್ಚರಿಕೆ ವಹಿಸಬೇಕು. ಜಿಲ್ಲೆಯ ಗಡಿಯಲ್ಲಿರುವ ಚೆಕ್ ಪೋಸ್ಟ್ ಗಳು ದಿನದ 24 ಗಂಟೆಯೂ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.
Advertisement