– 7 ದಿನಗಳಲ್ಲಿ ವರದಿ ನೀಡುವಂತೆ ಸಿಎಂ ಸೂಚನೆ
– ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮೋದಿ ಒತ್ತಾಯ
ಲಕ್ನೋ: ಉತ್ತರಪ್ರದೇಶದ ಹತ್ರಾಸ್ ಗ್ರಾಮದಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯ ಸಾವಿನ ಬಗ್ಗೆ ದೇಶದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಈ ಘಟನೆ ಕುರಿತು ವಿಶೇಷ ತನಿಖಾ ತಂಡ (ಎಸ್‍ಐಟಿ) ತನಿಖೆ ನಡೆಸುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ನೀಡಿದ್ದಾರೆ. ಇದನ್ನೂ ಓದಿ: ಗ್ಯಾಂಗ್‍ರೇಪ್ ಪ್ರಕರಣ – ಸಂತ್ರಸ್ತೆ ಕುಟುಂಬ ಹೊರಗಿಟ್ಟು 2.30ಕ್ಕೆ ಪೊಲೀಸರಿಂದ್ಲೇ ಅಂತ್ಯಕ್ರಿಯೆ!
Advertisement
ಅಪರಾಧಿಗಳು ಶಿಕ್ಷೆಯಿಂದ ತಪ್ಪಿಸಿಕೊಳ್ಳುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಮೂವರು ಸದಸ್ಯರನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಅಲ್ಲದೇ ಏಳು ದಿನಗಳಲ್ಲಿ ತನಿಖಾ ವರದಿಯನ್ನು ಸಲ್ಲಿಸುವ ಸೂಚಿಸಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡುವ ಮೂಲಕ ಈ ಬಗ್ಗೆ ಮಾಹಿತಿ ನೀಡಿದ್ದಾರೆ. “ಹತ್ರಾಸ್ ಸಾಮೂಹಿಕ ಅತ್ಯಾಚಾರ ಘಟನೆಯ ಅಪರಾಧಿಗಳನ್ನು ಬಿಡಲಾಗುವುದಿಲ್ಲ. ಘಟನೆಯ ತನಿಖೆಗಾಗಿ ಎಸ್‍ಐಟಿ ರಚಿಸಲಾಗಿದೆ. ಮುಂದಿನ 7 ದಿನಗಳಲ್ಲಿ ತಂಡವು ವರದಿಯನ್ನು ಸಲ್ಲಿಸುತ್ತದೆ. ಅಲ್ಲದೇ ಈ ಪ್ರಕರಣವನ್ನು ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗುವುದು ”ಎಂದು ತಿಳಿಸಿದ್ದಾರೆ.
Advertisement
Advertisement
ಹತ್ರಾಸ್ ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ನನ್ನೊಂದಿಗೆ ಮಾತನಾಡಿದ್ದಾರೆ. ವಿಚಾರಣೆಯನ್ನು ತ್ವರಿತಗತಿಯಲ್ಲಿ ನಡೆಸುವಂತೆ ಹಾಗೂ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ ಎಂದು ಸಿಎಂ ಯೋಗಿ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ. ಗೃಹ ಇಲಾಖೆ ಮುಖ್ಯ ಕಾರ್ಯದರ್ಶಿ ಭಗವಾನ್ ಸ್ವರೂಪ್ ಅವರು ಎಸ್‍ಐಟಿಯ ಉಸ್ತುವಾರಿ ವಹಿಸಲಿದ್ದು, ಚಂದ್ರಪ್ರಕಾಶ್, ಡಿಐಜಿ ಇದರ ಸದಸ್ಯರಾಗಿರುತ್ತಾರೆ.
Advertisement
ಬಂಧಿತ ನಾಲ್ವರು ಆರೋಪಿಗಳು ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆಗೆ ನೀಡಿದ ಕ್ರೂರತೆಯ ಬಗ್ಗೆ ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ ಕುಟುಂಬದ ವಿರುದ್ಧವಾಗಿ ಸಂತ್ರಸ್ತೆಯ ಅಂತ್ಯಕ್ರಿಯೆಯನ್ನು ಆತುರದಿಂದ ಉತ್ತರ ಪ್ರದೇಶ ಪೊಲೀಸರು ನೆರವೇರಿಸಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಚಿತ್ರಹಿಂಸೆಗೊಳಗಾಗಿ ಎರಡು ವಾರಗಳ ಅಂದರೆ ಮಂಗಳವಾರ ದೆಹಲಿಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ 20 ವರ್ಷದ ಯುವತಿಯ ಅಂತ್ಯಸಂಸ್ಕಾರವನ್ನು ಕಳೆದ ರಾತ್ರಿ ಪೊಲೀಸರೇ ನೆರವೇರಿಸಿದ್ದಾರೆ. ಈ ವೇಳೆ ಮೃತ ಯುವತಿಯ ಕುಟುಂಬ ಮತ್ತು ಸಂಬಂಧಿಕರನ್ನು ಅವರ ಮನೆಯಲ್ಲೇ ಕೂಡಿಹಾಕಿದ್ದಾರೆ ಎಂದು ಆರೋಪ ಕೇಳಿಬಂದಿದೆ.
आदरणीय प्रधानमंत्री श्री @narendramodi जी ने हाथरस की घटना पर वार्ता की है और कहा है कि दोषियों के विरुद्ध कठोरतम कार्रवाई की जाए।
— Yogi Adityanath (@myogiadityanath) September 30, 2020
ಈ ವೇಳೆ ಯುವತಿ ಕುಟುಂಬ ಹಾಗೂ ಪೊಲೀಸರ ಮಧ್ಯೆ ವಾಗ್ವಾದ ನಡೆದಿದ್ದು, ಇದಕ್ಕೆ ಸಂಬಂಧಿಸಿದಂತೆ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತಮ್ಮ ಮಗಳ ಮುಖವನ್ನು ನೋಡಲು ಬಿಡದಿದ್ದರಿಂದ ಉದ್ರಿಕ್ತರಾದ ಕುಟುಂಬಸ್ಥರು, ಅಂಬುಲೆನ್ಸ್ ಮೇಲೆ ಮರದ ತುಂಡುಗಳನ್ನು ಎಸೆಯುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಆದರೂ ಪೊಲೀಸರು ಮಾತ್ರ ಕ್ಯಾರೇ ಎನ್ನದೇ ಮೃತದೇಹವನ್ನು ತೆಗೆದುಕೊಂಡು ಹೋಗಿ ತಾವೇ ಅಂತ್ಯಸಂಸ್ಕಾರ ಮಾಡಿದ್ದಾರೆ. ಇದರಿಂದ ಯುವತಿಯ ಕುಟುಂಬಸ್ಥರು ಅಸಹಾಯಕರಾಗಿ ಕಣ್ಣೀರಿಟ್ಟಿದ್ದಾರೆ.
हाथरस में बालिका के साथ घटित दुर्भाग्यपूर्ण घटना के दोषी कतई नहीं बचेंगे।
प्रकरण की जांच हेतु विशेष जांच दल का गठन किया गया है। यह दल आगामी सात दिवस में अपनी रिपोर्ट देगा।
त्वरित न्याय सुनिश्चित करने हेतु इस प्रकरण का मुकदमा फास्ट ट्रैक कोर्ट में चलेगा।
— Yogi Adityanath (@myogiadityanath) September 30, 2020