ಮಂಗಳೂರು: ಕಡಬ ತಾಲೂಕಿನ ನೆಲ್ಯಾಡಿಯ ಹೊಸಮಜಲು ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಎರಡು ಟ್ಯಾಂಕರ್ ಗಳ ಮುಂಭಾಗ ನಜ್ಜುಗುಜ್ಜಾಗಿದೆ.
ಗ್ಯಾಸ್ ಟ್ಯಾಂಕರ್ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿತ್ತು. ಡೀಸೆಲ್ ಟ್ಯಾಂಕರ್ ಕೋಲಾರದಿಂದ ಮಂಗಳೂರು ಕಡೆಗೆ ಬರುತ್ತಿತ್ತು. ಹೊಸಮಜಲುವಿನಲ್ಲಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಗ್ಯಾಸ್ ಸೋರಿಕೆ ಆಗಿಲ್ಲ. ಅಪಘಾತಕ್ಕೆ ಕಾರಣ ತಿಳಿದು ಬಂದಿಲ್ಲ.
ಎರಡೂ ಟ್ಯಾಂಕರ್ ಗಳು ಚಾಲಕರಿಗೂ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.