– ಹೂವಿನ ಹಾರ ಹಾಕಿ, ಬೀದಿಯಲ್ಲಿ ಅಡುಗೆ
ಗದಗ: ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ಖಂಡಿಸಿ, ಕೇಂದ್ರ ಸರ್ಕಾರದ ವಿರುದ್ಧ ಗದಗನಲ್ಲಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ಬೀದಿಯಲ್ಲಿ ಅಡುಗೆ ತಯಾರಿಸುವ ಮೂಕಲವಾಗಿ ವಿಭಿನ್ನವಾಗಿ ಹೋರಾಟ ಮಾಡಿದ್ದಾರೆ.
ಸಿಲಿಂಡರ್ ಗೆ ಹೂವಿನ ಹಾರ ಹಾಕಿ ಅದನ್ನು ಬದಿಗಿಟ್ಟು, ಕಟ್ಟಿಗೆ ಉರಿಸಿ ಅಡುಗೆ ಮಾಡಿದರು. ನಗರದ ಮಹಾತ್ಮಾಗಾಂಧಿ ವೃತ್ತದಲ್ಲಿ ಪ್ರತಿಭಟಿಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕವಾಗಿ ಆಕ್ರೋಶ ಹೊರಹಾಕಿದರು.
Advertisement
Advertisement
ಸಿಲಿಂಡರ್, ಪಾತ್ರೆಗಳನ್ನು ತಲೆ ಮೇಲೆ ಹೊತ್ತು ಪ್ರತಿಭಟಿಸಿದರು. ದುಬಾರಿಯಾದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ಬೀದಿಗೆ ಬಂದಿದೆ. ಬೀದಿಯಲ್ಲಿ ತರತರನಾದ ಅಡುಗೆ ಮಾಡಿದರು. ಜಗತ್ತಿನಲ್ಲಿ ಪೆಟ್ರೋಲ್, ಡೀಸೆಲ್ ಉತ್ಪನ್ನಗಳಿಗೆ ಅತಿ ಹೆಚ್ಚು ತೆರಿಗೆಯನ್ನು ವಿಧಿಸುತ್ತಿರುವ ದೇಶ ನಮ್ಮ ಭಾರತ ದೇಶವಾಗಿದೆ.
Advertisement
Advertisement
ಸಾಮಾನ್ಯರ ಜೀವಮಾನದ ಹಣವನ್ನು ಕಾರ್ಪೋರೇಟ್ ಕುಳಗಳಿಗೆ ಧಾರೆಯೆರೆದು, ಬಡವರನ್ನು ಕೂಪಕ್ಕೆ ತಳ್ಳುವ ಸರ್ಕಾರವಾಗಿದೆ. ಶ್ರೀಮಂತರಿಗೆ ಸರ್ಕಾರ ಸೈ ಎನಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. ಈ ಪ್ರತಿಭಟನೆಯಲ್ಲಿ ಅನೇಕ ಮಹಿಳೆಯರು ಪಾಲ್ಗೊಂಡಿದ್ದರು.