ಗ್ಯಾಸ್ ಸಿಲಿಂಡರ್ ಲೀಕ್, ಹೊತ್ತಿ ಉರಿದ ಮನೆ – ತಪ್ಪಿದ ಭಾರೀ ಅನಾಹುತ

Public TV
1 Min Read
fire 3

ಚಿಕ್ಕೋಡಿ: ಆಕಸ್ಮಿಕ ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಬೆಂಕಿ ತಗುಲಿ ಮನೆ ಹೊತ್ತಿ ಉರಿದಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಪ್ರಭುವಾಡಿಯಲ್ಲಿ ನಡೆದಿದೆ.

fire 2

ದಿಲೀಪ್ ಶಂಕರ್ ಕದಂ ಎಂಬವರ ಮನೆಯಲ್ಲಿದ್ದ ಗ್ಯಾಸ್ ಲೀಕ್ ಆಗಿ ಏಕಾಏಕಿ ಬೆಂಕಿ ತಗುಲಿದೆ. ಈ ಪರಿಣಾಮ ಮನೆಗೆ ಬೆಂಕಿ ಹತ್ತಿ ಮನೆಯಲ್ಲಿದ್ದ ವಸ್ತುಗಳು ನಾಶವಾಗಿವೆ. ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಧಗಧಗನೆ ಮನೆ ಹೊತ್ತಿ ಉರಿದಿದೆ. ಆಕಸ್ಮಿಕವಾಗಿ ಗ್ಯಾಸ್ ಲೀಕ್ ಆಗಿದ್ದರಿಂದ ಘಟನೆ ಸಂಭವಿಸಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಮನೆಯ ಸದಸ್ಯರು ಪಾರಾಗಿದ್ದಾರೆ.

fire 1

ಸದ್ಯ ಸ್ಥಳಕ್ಕೆ ಭೇಟಿ ನೀಡಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಘಟನೆಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ:ಸಿಲಿಂಡರ್ ಹೊತ್ತ ಟ್ರಕ್ ಪಲ್ಟಿಯಾಗಿ ಸ್ಫೋಟಗೊಂಡು ಹೊತ್ತಿ ಉರಿಯಿತು

Share This Article
Leave a Comment

Leave a Reply

Your email address will not be published. Required fields are marked *