ಬೆಂಗಳೂರು: ಹಳ್ಳಿ ಫೈಟ್‍ನ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಬೆಳಗ್ಗೆ 8 ಗಂಟೆಯಿಂದ ಆಯಾ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ಆರಂಭ ಆಗಲಿದ್ದು, ರಾತ್ರಿ ವೇಳೆಗೆ ಸಂಪೂರ್ಣ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.
Advertisement
ರಾಜ್ಯದ 5,728 ಗ್ರಾಮಪಂಚಾಯ್ತಿಗಳ 82,616 ಸ್ಥಾನಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆದಿತ್ತು. ಶೇ.82ರಷ್ಟು ಮತದಾನವಾಗಿತ್ತು. 2,22,814 ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷಿಸಿಕೊಂಡಿದ್ರು. 8,074 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿತ್ತು. ಚಿನ್ಹೆ ಗೊಂದಲದ ಕಾರಣ ಮಂಗಳವಾರ ಬೆಳಗಾವಿಯ ಕದಂಪುರ ಮತ್ತು ಬಾಗಲಕೋಟೆಯ ಕಲಾದಗಿಯಲ್ಲಿ ಮರುಮತದಾನ ನಡೆದಿದೆ.
Advertisement
Advertisement
ಆಡಳಿತಾರೂಢ ಬಿಜೆಪಿ ಪಕ್ಷದ ನಾಯಕರು, ತಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳೇ ಹೆಚ್ಚು ಕಡೆ ಗೆಲುವು ಸಾಧಿಸುತ್ತಾರೆ. ಬಹುತೇಕ ಗ್ರಾಮಪಂಚಾಯ್ತಿಗಳಲ್ಲಿ ಕಮಲ ಅರಳಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಕೂಡ ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿದೆ.