ಚಾಮರಾಜನಗರ: ಗ್ರಾಮ ಪಂಚಾಯತ್ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಈ ಮಧ್ಯೆ ಕೆಲವೆಡೆಗಳಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗುತ್ತಿದೆ. ಇದೀಗ ಪತ್ನಿ ಗ್ರಾಮ ಪಂಚಾಯತ್ ಚುನಾವಣೆಗೆ ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿಂಗರಾಜು(27) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಪತ್ನಿ ಅವಿರೋಧವಾಗಿ ಆಯ್ಕೆಯಾದ ಮರುದಿನವೇ ನೇಣಿಗೆ ಶರಣಾಗಿದ್ದಾರೆ. ಚಾಮರಾಜನಗರ ತಾಲೂಕಿನ ದೊಡ್ಡರಾಯ ಪೇಟೆಯಲ್ಲಿ ಈ ಘಟನೆ ನಡೆದಿದೆ.
ಪತ್ನಿ ಗಗನ ಗ್ರಾ.ಪಂ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಆಯ್ಕೆಯಾದ ಮರುದಿನವೇ ಪತಿ ನೇಣಿಗೆ ಶರಣಾಗಿದ್ದಾರೆ. ನಿನ್ನೆ ರಾತ್ರಿ ಸ್ನೇಹಿತರಿಗೆ ಪಾರ್ಟಿ ಕೊಟ್ಟು ನಿಂಗರಾಜು ಮನೆಗೆ ಬಂದಿದ್ದಾರೆ. ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮದುವೆಯಾಗಿ 4 ವರ್ಷವಾದರೂ ಈ ದಂಪತೊಗೆ ಮಕ್ಕಳು ಆಗಿರಲಿಲ್ಲ. ಹೀಗಾಗಿ ಮಕ್ಕಳಾಗಲಿಲ್ಲ ಎಂದು ಮನನೊಂದು ನೇಣಿಗೆ ಶರಣಾಗಿದ್ದಾರೆಂದು ಹೇಳಲಾಗುತ್ತಿದೆ. ತಾಯಿ ಮಹದೇವಮ್ಮ, ಪತ್ನಿ ಗಗನ ಆಕ್ರಂದನ ಮುಗಿಲುಮುಟ್ಟಿದೆ. ಈ ಸಂಬಂಧ ಚಾಮರಾಜನಗರ ಪೂರ್ವ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.