– ಈ ವರೆಗೆ ಶೇ.48 ವಾರ್ಡ್‍ಗಳಲ್ಲಿ ಬಿಜೆಪಿ ಬೆಂಬಲಿತರಿಗೆ ಗೆಲುವು
ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಶೇ.48ರಷ್ಟು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಬಿ.ಎಲ್.ಸಂತೋಷ್, ಒಟ್ಟು 82,616 ಗ್ರಾಮ ಪಂಚಾಯತ್ ವಾರ್ಡ್‍ಗಳ ಪೈಕಿ ಈ ವರೆಗೆ 5,344, ಅಂದರೆ ಶೇ.48 ರಷ್ಟು ವಾರ್ಡ್‍ಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಗ್ರೇಟ್ ಗೋಯಿಂಗ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.
Of 82616 wards in GP elections on Karnataka , @BJP4Karnataka is ahead with victory in 5344 wards ( 48% ) as of now . Great going …. Congratulations @BSYBJP @nalinkateel
— B L Santhosh (@blsanthosh) December 30, 2020
ಗ್ರಾಮ ಪಂಚಾಯತ್ ಚುನಾವಣೆಗಳ ಮತ ಎಣೆಕೆ ಕಾರ್ಯ ಭರದಿಂದ ಸಾಗಿದ್ದು, ಬಹುತೇಕ ವಾರ್ಡ್‍ಗಳಲ್ಲಿ ಫಲಿತಾಂಶ ಪ್ರಕಟವಾಗಿದೆ. ಇನ್ನೂ ಕೆಲ ವಾರ್ಡ್‍ಗಳಲ್ಲಿ ಎಣಿಕೆ ನಡೆಯುತ್ತಿದೆ. ಸಂಜೆ ಅಥವಾ ರಾತ್ರಿಯ ವೇಳೆ ಎಲ್ಲ ಗ್ರಾಮ ಪಂಚಾಯಿತಿಗಳ ಫಲಿತಾಂಶ ಹೊರ ಬೀಳಲಿದೆ..