ಪುಣೆ: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ 41 ರನ್ ಬಾರಿಸುತ್ತಿದ್ದಂತೆ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಗ್ರೇಮ್ ಸ್ಮಿತ್ ದಾಖಲೆ ಮುರಿದಿದ್ದಾರೆ.
Advertisement
ವಿರಾಟ್ ನಾಯಕನಾಗಿ ಏಕದಿನ ಪಂದ್ಯದಲ್ಲಿ 5,441 ರನ್ ಸಿಡಿಸುವ ಮೂಲಕ ದಕ್ಷಿಣ ಆಫ್ರಿಕಾ ತಂಡ ಮಾಜಿ ನಾಯಕ ಗ್ರೇಮ್ ಸ್ಮಿತ್ ಅವರ ದಾಖಲೆಯನ್ನು ಮುರಿದಿದ್ದಾರೆ. ಸ್ಮಿತ್ 150 ಏಕದಿನ ಪಂದ್ಯಗಳಿಂದ 5,416 ರನ್ ಗಳಿಸಿದ್ದರು. ಇದೀಗ ಸ್ಮಿತ್ ಅವರ ದಾಖಲೆಯನ್ನು ಮುರಿದು ಕೊಹ್ಲಿ ಹೊಸ ದಾಖಲೆಯನ್ನು ತನ್ನ ಹೆಸರಿಗೆ ಬರೆಸಿಕೊಂಡಿದ್ದಾರೆ.
Advertisement
ವಿರಾಟ್ ಈ ಮೂಲಕ ನಾಯಕನಾಗಿ ಅತೀ ಹೆಚ್ಚು ರನ್ ಸಿಡಿಸಿದವರ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ರಿಕಿ ಪಾಟಿಂಗ್ 234 ಪಂದ್ಯಗಳಿಂದ 8,497 ರನ್ ಸಿಡಿಸಿ ಮೊದಲ ಸ್ಥಾನದಲ್ಲಿದ್ದರೆ, 200 ಪಂದ್ಯಗಳಿಂದ 6641 ರನ್ ಬಾರಿಸುವ ಮೂಲಕ ಎರಡನೇ ಸ್ಥಾನದಲ್ಲಿ ಭಾರತ ತಂಡದ ಮಾಜಿ ನಾಯಕ ಎಂಎಸ್ ಧೋನಿ ಇದ್ದಾರೆ. ಮೂರನೇ ಸ್ಥಾನದಲ್ಲಿ ಸ್ಟೀಫನ್ ಫ್ಲೇಮಿಂಗ್ ಇದ್ದು, ನಾಲ್ಕನೇ ಸ್ಥಾನದಲ್ಲಿ ಶ್ರೀಲಂಕಾದ ಅರ್ಜುನ್ ರಣತುಂಗ ಪಡೆದುಕೊಂಡಿದ್ದಾರೆ.
Advertisement
Advertisement
ಈ ದಾಖಲೆಯೊಂದಿಗೆ ವಿರಾಟ್ ಇನ್ನೊಂದು ದಾಖಲೆ ಮಾಡಿದ್ದು, ಮೂರನೇ ಕ್ರಮಾಂಕದಲ್ಲಿ ಬ್ಯಾಟ್‍ಬೀಸಿ 10 ಸಾವಿರ ರನ್ ಸಿಡಿಸಿದ ವಿಶ್ವದ ಎರಡನೇ ಆಟಗಾರನಾಗಿ ಹೊರ ಹೊಮ್ಮಿದ್ದಾರೆ. ಇಂಗ್ಲೆಂಡ್ ವಿರುದ್ಧ ಪುಣೆಯಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 10,000 ರನ್ ಸಿಡಿಸಿ ನೂತನ ದಾಖಲೆ ನಿರ್ಮಿಸಿದರು. ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ರಿಕಿ ಪಾಟಿಂಗ್ ಮೂರನೇ ಕ್ರಮಾಂಕದಲ್ಲಿ 330 ಇನ್ನಿಂಗ್ಸ್ ಗಳಿಂದ 12,662 ರನ್ ಬಾರಿಸುವ ಮೂಲಕ ಮೊದಲ ಸ್ಥಾನದಲ್ಲಿದ್ದರೆ. ಎರಡನೇ ಸ್ಥಾನ ವಿರಾಟ್ ಕೊಹ್ಲಿ ಪಾಲಾಗಿದೆ. ಕೊಹ್ಲಿ 190 ಇನ್ನಿಂಗ್ಸ್ ಗಳಿಂದ 10,000 ರನ್ ಸಿಡಿಸಿದ್ದಾರೆ. 3 ಮತ್ತು 4 ನೇ ಸ್ಥಾನದಲ್ಲಿ ಕ್ರಮವಾಗಿ ಶ್ರೀಲಂಕಾದ ಮಾಜಿ ನಾಯಕ ಕುಮಾರ ಸಂಗಕ್ಕರ ಮತ್ತು ದಕ್ಷಿಣ ಆಫ್ರಿಕಾದ ಜಾಕ್ ಕಾಲಿಸ್ ಇದ್ದಾರೆ.
ವಿರಾಟ್ ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಉತ್ತಮವಾಗಿ ಬ್ಯಾಟ್‍ಬೀಸಿ 66ರನ್ (79 ಎಸೆತ,3 ಬೌಂಡರಿ, 1 ಸಿಕ್ಸರ್) ಸಿಡಿಸಿ ಔಟ್ ಆದರು. ಭಾರತ ಪರ ಕೆ. ಎಲ್ ರಾಹುಲ್ 108 ರನ್( 114 ಬಾಲ್,7 ಬೌಂಡರಿ,2 ಸಿಕ್ಸರ್) ಬಾರಿಸಿ ಭಾರತಕ್ಕೆ ಬೃಹತ್ ಮೊತ್ತ ಪೇರಿಸುವಲ್ಲಿ ನೆರವಾಗಿದ್ದಾರೆ. ಭಾರತ ನಿಗದಿತ ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 336 ರನ್ ಗಳಿಸಿದೆ. ಇಂಗ್ಲೆಂಡ್ 337 ರನ್‍ಗಳ ಗುರಿ ಪಡೆದುಕೊಂಡಿದೆ.