– ಕೊಡಗಿನಲ್ಲಿ ಇಂದು ಎಲ್ಲೋ, ನಾಳೆ ರೆಡ್ ಅಲರ್ಟ್
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಉದ್ಭವಿಸಿದ್ದು, ಇಂದು ಹಾಗೂ ನಾಳೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
Advertisement
ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಇತ್ತ ಕೊಡಗಿನಲ್ಲಿ ಆಗಲೇ ಜಿಲ್ಲಾಡಳಿತ ಎಚ್ಚರಿಕೆ ನೀಡಿದ್ದು, ಇಂದು ಮತ್ತು ನಾಳೆ ಕೊಡಗಿನ ಭಾರೀ ಮಳೆ ಸಾಧ್ಯತೆ ಹಿನ್ನೆಲೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ. 64 ಮಿಲಿ ಮೀಟರ್ ಗೂ ಅಧಿಕ ಮಳೆ ಸುರಿಯುವ ಸಾಧ್ಯತೆ ಇದೆ ಹೀಗಾಗಿ ಇಂದು ಎಲ್ಲೋ ಅಲರ್ಟ್, ನಾಳೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
Advertisement
Advertisement
ನಾಳೆ ಕೊಡಗಿನಲ್ಲಿ 204 ಮಿಲಿ ಮೀಟರ್ ಮಳೆಯಾಗುವ ಸಾಧ್ಯತೆ ಇದೆ. ಜನರು ಎಚ್ಚರದಿಂದ ಇರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಬಾಗಮಂಡಲ, ಕೋರಂಗಾಲ ಸುತ್ತಮುತ್ತ ಭಾರೀ ಮಳೆ ಸಾಧ್ಯತೆ ಇದೆ ಎಂದು ಆಟೋಗಳಲ್ಲಿ ಮೈಕ್ ಕಟ್ಟಿ ಜಿಲ್ಲಾಡಳಿತ ಜನರಿಗೆ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದೆ. ಎರಡು ದಿನಗಳ ಕಾಲ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸಹ ಸೂಚನೆ ನೀಡಿದೆ.