ಬೆಂಗಳೂರು: ಮಾದಪ್ಪನ ಗೀತೆಯನ್ನು ಅಶ್ಲೀಲವಾಗಿ ತೋರಿಸಿರುವ ಆರೋಪದ ಮೇರೆಗೆ ಬಿಗ್‍ಬಾಸ್ ವಿನ್ನರ್, ರ‍್ಯಾಪರ್ ಚಂದನ್ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ.
ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಚಂದನ್ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ. ಬಜರಂಗದಳ ಮುಖಂಡ ತೇಜಸ್ ಗೌಡ ಅವರು ಚಂದನ್ ವಿರುದ್ಧ ದೂರು ದಾಖಲಿಸಿದ್ದಾರೆ. ದೂರು ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ಎನ್‍ಸಿಆರ್(ಗಂಭೀರವಲ್ಲದ ಪ್ರಕರಣ) ದಾಖಲು ಮಾಡಿದ್ದಾರೆ. ಇದನ್ನೂ ಓದಿ: ಚಂದನ್ ಶೆಟ್ಟಿಗೆ ಬ್ಯಾನ್ ವಾರ್ನಿಂಗ್ ಕೊಟ್ಟ ಎಸ್ಪಿ
Advertisement
ಹಿಂದೂ ಧಾರ್ಮಿಕ ಭಾವನೆಗಳಿಗೆ ದಕ್ಕೆ ತರುವ ರೀತಿಯಲ್ಲಿ ಜಾನಪದ ಗೀತೆಯನ್ನು ಚಿತ್ರೀಕರಣ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಚಂದನ್ ಶೆಟ್ಟಿ ವಿರುದ್ಧ ಕ್ರಮಕೈಗೊಳ್ಳುವಂತೆ ತೇಜಸ್ ಗೌಡ ದೂರು ನೀಡಿದ್ದಾರೆ.
Advertisement
Advertisement
ಏನಿದು ಪ್ರಕರಣ?
ಗಣೇಶ ಹಬ್ಬಕ್ಕೆ ‘ಕೋಲು ಮಂಡೆ ಜಂಗಮ ದೇವರು’ ಎಂಬ ಹೊಸ ರ‍್ಯಾಪ್ ಸಾಂಗ್ ಅನ್ನು ಚಂದನ್ ಶೆಟ್ಟಿ ಯೂಟ್ಯೂಬ್‍ನಲ್ಲಿ ಬಿಡುಗಡೆ ಮಾಡಿದ್ದರು. ಆದರೆ ಮಾದಪ್ಪನ ಗೀತೆಯನ್ನು ಅಶ್ಲೀಲವಾಗಿ ತೋರಿಸಿರುವ ಆರೋಪ ಚಂದನ್ ಶೆಟ್ಟಿ ವಿರುದ್ಧ ಕೇಳಿಬಂದಿದೆ. ಶಿವಶರಣೆ ಸಂಕಮ್ಮನ ಬಗ್ಗೆ ಅಶ್ಲೀಲ ಪ್ರದರ್ಶಿಸಲಾಗಿದೆ ಮತ್ತು ಭಕ್ತಿ ಗೀತೆಯನ್ನು ತಿರುಚಲಾಗಿದೆ. ಈ ಮೂಲಕ ಮಾದಪ್ಪನ ಭಕ್ತರ ಧಾರ್ಮಿಕ ಮನೋಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚಂದನ್ ಶೆಟ್ಟಿ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
Advertisement
ಈ ಸಂಬಂಧ ವಿಡಿಯೋ ಮಾಡಿ ಸ್ಪಷ್ಟನೆ ಕೊಟ್ಟ ಚಂದನ್, ಯಾರ ಭಾವನೆಗಳಿಗೂ ಧಕ್ಕೆ ಉಂಟು ಮಾಡಲು ಈ ಹಾಡನ್ನು ಮಾಡಿಲ್ಲ. ಈಗಿನ ಪೀಳಿಗೆಗೆ ನಮ್ಮ ಜಾನಪದ ತಲುಪಲಿ ಅನ್ನೋ ಕಾರಣಕ್ಕೆ ರ್ಯಾಪ್ ಹಾಡಿನ ರೂಪ ಕೊಟ್ಟಿದ್ದೆ. ಇದರಿಂದ ಯಾರಿಗಾದರೂ ಬೇಸರವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದರು. ನಂತರ ಚಂದನ್ ಶೆಟ್ಟಿ ವಿಡಿಯೋವನ್ನು ಯೂಟ್ಯೂಬ್ ಖಾತೆಯಿಂದ ಡಿಲೀಟ್ ಮಾಡಿದ್ದಾರೆ.