ಚಂದ್ರಶೇಖರ್ ಕಂಬಾರ ಅವರಿಗೆ ಸಿಎಂ ಬಿಎಸ್‍ವೈ ಸನ್ಮಾನ

Public TV
1 Min Read
Chandrashekhar Kambar B S Yediyurappa Shettar

ಬೆಂಗಳೂರು: ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಚಂದ್ರಶೇಖರ್ ಕಂಬಾರ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಅಭಿನಂದಿಸಿ ಸನ್ಮಾನಿಸಿದರು. ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ರಾಜ್ಯದ 5 ಮಂದಿ ಸೇರಿದಂತೆ ಒಟ್ಟು 119 ಮಂದಿಗೆ ಪದ್ಮ ಪ್ರಶಸ್ತಿ ಸಿಗಲಿದೆ. ಖ್ಯಾತ ಗಾಯಕ ಎಸ್‍ಪಿ ಬಾಲಸುಬ್ರಹ್ಮಣ್ಯಂ ಅವರು ಮರಣೋತ್ತರ ಪದ್ಮ ವಿಭೂಷಣ ಗೌರವಕ್ಕೆ ಪಾತ್ರವಾಗಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಡಾ.ಬಿಎಂ ಹೆಗ್ಡೆ ಅವರಿಗೆ ಪದ್ಮವಿಭೂಷಣ ಸಾಹಿತ್ಯ ರಂಗದಲ್ಲಿ ಚಂದ್ರಶೇಖರ್ ಕಂಬಾರ ಅವರಿಗೆ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ. ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಎಸ್‍ಪಿಬಿ ಸೇರಿದಂತೆ ಒಟ್ಟು 10 ಗಣ್ಯರಿಗೆ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಲಾಗಿದೆ.

chandrashekar kambar 1

ಮಂಜಮ್ಮ ಜೋಗತಿ(ಕಲೆ), ರಂಗಸ್ವಾಮಿ ಲಕ್ಷ್ಮಿ ನಾರಾಯಣ ಕಶ್ಯಪ( ಸಾಹಿತ್ಯ ಮತ್ತು ಶಿಕ್ಷಣ), ಕೆವೈ ವೆಂಕಟೇಶ್(ಕ್ರೀಡೆ ) ಅವರು ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದಾರೆ. ಸಾರ್ವಜನಿಕ ವ್ಯವಹಾರಗಳ ವಿಭಾಗದಲ್ಲಿ ಪ್ರಶಸ್ತಿ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಸಿಕ್ಕಿದೆ. ಒಟ್ಟು 7 ಮಂದಿಗೆ ಪದ್ಮ ವಿಭೂಷಣ, 10 ಮಂದಿಗೆ ಪದ್ಮಭೂಷಣ, 102 ಮಂದಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಈ ಬಾರಿ ನೀಡಲಾಗುತ್ತದೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮುಂದಿನ ದಿನಗಳಲ್ಲಿ ರಾಷ್ಟ್ರಪತಿ ಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿ ಈ ಪ್ರಶಸ್ತಿಯನ್ನು ಸಾಧಕರಿಗೆ ನೀಡಿ ಗೌರವಿಸಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *