– ಸಾಮಾಜಿಕ ಅಂತರ ಕಾಯ್ದುಕೊಳ್ಳದ ಅಂಗಡಿಗಳು ಕ್ಲೋಸ್
– ಸೋಂಕಿತರ ಹಳ್ಳಿ ಸೀಲ್‍ಡೌನ್
ಹಾಸನ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚನ್ನರಾಯಪಟ್ಟಣದಲ್ಲಿ ಕಟ್ಟು ನಿಟ್ಟಾಗಿ ನಿಯಮ ಪಾಲಿಸಲು ಅಧಿಕಾರಿಗಳ ಸೂಚನೆ ನೀಡಿದ್ದಾರೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಕ್ವಾರಂಟೈನ್ ಕೇಂದ್ರದಲ್ಲಿದ್ದವರಲ್ಲಿ ಕೊರೊನಾ ಸೋಂಕು ಪತ್ತೆಯಾದ ಕಾರಣ, ಪಟ್ಟಣದ ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜೊತೆಗೆ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯ ಮಾಡಲಾಗಿದೆ. ಅಲ್ಲದೆ ಅನಾವಶ್ಯಕವಾಗಿ ಜನ ಬೀದಿಗಿಳಿಯದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಅಂಗಡಿಗಳನ್ನು ಅಧಿಕಾರಿಗಳು ಕ್ಲೋಸ್ ಮಾಡಿಸಿದ್ದಾರೆ. ಮಂಗಳವಾರ ರಾತ್ರಿ ಸಾಮಾಜಿಕ ಅಂತರದ ನಿರ್ಲಕ್ಷ್ಯ ತೋರಿಸಿದ ಅಂಗಡಿಗಳನ್ನು ಅಧಿಕಾರಿಗಳು ಕ್ಲೋಸ್ ಮಾಡಿಸಿದ್ದಾರೆ. ಮುಂಬೈನಿಂದ ಬಂದ ಐವರಲ್ಲಿ ಮಂಗಳವಾರ ಕೊರೊನಾ ಪಾಸಿಟಿವ್ ಕಂಡು ಬಂದಿತ್ತು. ಅವರಲ್ಲಿ ನಾಲ್ವರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದರು. ಈ ಕಾರಣದಿಂದ ಸೋಂಕಿತರ ಹಳ್ಳಿಯನ್ನು ಸೀಲ್‍ಡೌನ್ ಮಾಡಲಾಗಿದೆ.