Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಲನಚಿತ್ರ, ಕಿರುತೆರೆ ರಂಗದವರಿಗೆ ಆರ್ಥಿಕ ನೆರವು: ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಲನಚಿತ್ರ, ಕಿರುತೆರೆ ರಂಗದವರಿಗೆ ಆರ್ಥಿಕ ನೆರವು: ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನ

Bengaluru City

ಚಲನಚಿತ್ರ, ಕಿರುತೆರೆ ರಂಗದವರಿಗೆ ಆರ್ಥಿಕ ನೆರವು: ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಆಹ್ವಾನ

Public TV
Last updated: June 22, 2021 5:38 pm
Public TV
Share
2 Min Read
shooting 1
SHARE

ಬೆಂಗಳೂರು: ಕೋವಿಡ್ -19 ನ ಎರಡನೇ ಅಲೆ ಹಿನ್ನೆಲೆಯಲ್ಲಿ ಜಾರಿಯಾಗಿದ್ದ  ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಚಲನಚಿತ್ರ ಮತ್ತು ಕಿರುತೆರೆ ಕಲಾವಿದರು ಮತ್ತು ತಂತ್ರಜ್ಞರು ಹಾಗೂ ಚಲನಚಿತ್ರ ಮಂದಿರದ ಕಾರ್ಮಿಕರಿಗೆ ಮುಖ್ಯಮಂತ್ರಿ ಯವರು ಘೋಷಿಸಿದ್ದ ಮೂರು ಸಾವಿರ ರೂ. ಮೊತ್ತದ ವಿಶೇಷ ಆರ್ಥಿಕ ಪ್ಯಾಕೇಜ್ ನೆರವಿಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆನ್ಲೈನ್ ಅರ್ಜಿ ಆಹ್ವಾನಿಸಿದೆ.

ರಾಜ್ಯದಲ್ಲಿ ಎರಡನೇ ಅಲೆಯ ವೇಳೆ ಸರ್ಕಾರ ವಿಧಿಸಿದ್ದ ನಿರ್ಬಂಧದಿಂದಾಗಿ ಬಾಧಿತರಾಗಿದ್ದ ಸಮಾಜ ವಿವಿಧ ವರ್ಗದವರಿಗೆ ಮುಖ್ಯಮಂತ್ರಿ ಯವರು 2021ರ ಜೂನ್ 3 ರಂದು ವಿಶೇಷ ಪರಿಹಾರದ ಎರಡನೇ ಪ್ಯಾಕೇಜ್ ಅನ್ನು ಘೋಷಣೆ ಮಾಡಿದ್ದರು. ಇದರಲ್ಲಿ ಚಲನಚಿತ್ರೋದ್ಯಮ ಹಾಗೂ ಕಿರುತೆರೆ ಮಾಧ್ಯಮದಲ್ಲಿ ತೊಡಗಿಕೊಂಡಿರುವ ನೋಂದಾಯಿತ ಅಸಂಘಟಿತ ಕಾರ್ಮಿಕರಿಗೆ ತಲಾ ಮೂರು ಸಾವಿರ ರೂ. ಪರಿಹಾರ ನೀಡಲು ಸರ್ಕಾರವು ನಿರ್ಧರಿಸಿತ್ತು. ಸರ್ಕಾರದ ಈ ನಿರ್ಧಾರದಿಂದಾಗಿ ಇಪ್ಪತ್ತೆರಡು (22) ಸಾವಿರ ನೋಂದಾಯಿತ ಕಾರ್ಮಿಕರಿಗೆ ಅನುಕೂಲವಾಗಲಿದೆ. ಇದಕ್ಕಾಗಿ ಅಂದಾಜು ಆರು ಕೋಟಿ ಅರವತ್ತು ಲಕ್ಷ ರೂ. ಮೀಸಲಿರಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ. ಪಿ.ಎಸ್. ಹರ್ಷ ಅವರು ತಿಳಿಸಿದ್ದಾರೆ.

cinema serial shooting 5 medium

ಚಲನಚಿತ್ರ ರಂಗದವರು ಮತ್ತು ಕಿರುತೆರೆ ರಂಗದವರಿಗೆ ಆರ್ಥಿಕ ನೆರವನ್ನು ಆಧಾರ್ ಕಾರ್ಡ್ ಸಂಖ್ಯೆಯನ್ನು ಆಧರಿಸಿ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲು ಅನುವಾಗುವಂತೆ ಸೇವಾಸಿಂಧು ತಾಣದಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ನಮೂನೆ ಮತ್ತು ಇನ್ನಿತರ ಷರತ್ತುಗಳಿಗಾಗಿ www.sevasindhu.karnataka.gov.in ಗೆ ಭೇಟಿ ನೀಡಿ ಪಡೆದುಕೊಳ್ಳಬಹುದು. ಇದನ್ನೂ ಓದಿ : 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಿ, ಕಾಲೇಜು ತೆರೆಯಿರಿ – ತಜ್ಞರ ವರದಿಯಲ್ಲಿ ಏನಿದೆ?

ಒಬ್ಬರಿಗೆ ಒಂದು ಅರ್ಜಿಯನ್ನು ಮಾತ್ರ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಸುವವರು ಸಂಬಂಧಿತ ಸಂಘಗಳಲ್ಲಿ ಸದಸ್ಯತ್ವ ಹೊಂದಿರಬೇಕು ಮತ್ತು ಅಲ್ಲಿಂದ ಕಡ್ಡಾಯವಾಗಿ ಶಿಫಾರಸ್ಸು ಪತ್ರ ಪಡೆದು ಅದನ್ನು ಸೇವಾಸಿಂಧು ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡಬೇಕಾಗಿದೆ. ಹಾಗೆಯೇ, ಚಲನಚಿತ್ರ ಮಂದಿರಗಳಲ್ಲಿ ಕೆಲಸ ಮಾಡುವವರು ಭವಿಷ್ಯ ನಿಧಿ (ಪ್ರಾವಿಡೆಂಟ್ ಫಂಡ್) ಸಂಖ್ಯೆಯೊಂದಿಗೆ ಚಲನಚಿತ್ರ ಮಂದಿರದ ಮಾಲೀಕರ ಪತ್ರದೊಂದಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಆನ್ಲೈನ್ ಅರ್ಜಿಯು 2021ರ ಜುಲೈ 9ರ ವರೆಗೆ ಸೇವಾಸಿಂಧು ಪೋರ್ಟಲ್ನಲ್ಲಿ ಲಭ್ಯವಿದೆ. ಆರ್ಥಿಕ ನೆರವಿನ ಅರ್ಜಿ ಇಲ್ಲವೇ ಶಿಫಾರಸ್ಸು ಪತ್ರಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಯಾವುದೇ ಕಚೇರಿಗಳಲ್ಲಿ ಸ್ವೀಕರಿಸಲಾಗುವುದಿಲ್ಲ.

shooting 3 e1590677418109

ಆರ್ಥಿಕ ನೆರವಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಮತ್ತು ಆನ್ ಲೈನಿನಲ್ಲಿ ಅರ್ಜಿಯನ್ನು ಭರ್ತಿ ಮಾಡಲು, ತಾಂತ್ರಿಕ ಮಾರ್ಗದರ್ಶನದ ಅಗತ್ಯವಿದ್ದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿಯಲ್ಲಿ ಸ್ಥಾಪಿಸಿರುವ ಸಹಾಯವಾಣಿಯ ಮೊಬೈಲ್ ಸಂಖ್ಯೆ 89046 45529 ಅನ್ನು ಸಂಪರ್ಕಿಸಬಹುದು ಇಲ್ಲವೆ dpmfilm1@gmail.com ಗೆ ಇಮೇಲ್ ಮೂಲಕ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

TAGGED:CoronaCovid 19kannada newskarnatakaಕೊರೊನಾಕೋವಿಡ್ 19ಚಲನಚಿತ್ರಶೂಟಿಂಗ್
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

CRIME
Crime

ಹಾಡಹಗಲೇ ಕತ್ತು ಕೊಯ್ದು ಪತ್ನಿಯ ಬರ್ಬರ ಹತ್ಯೆ – ಶವದ ಮೇಲೆ ಕಾರು ಹಾಯಿಸಿ ವಿಕೃತಿ, ಪತಿ ವಶಕ್ಕೆ

Public TV
By Public TV
39 minutes ago
Belagavi Ministers
Bagalkot

ಬೆಳಗಾವಿಯ ನಾಯಕರಿಗೆ ಉಪಕದನ ಗೆಲ್ಲಿಸುವ ಜವಾಬ್ದಾರಿ – ಕಾಂಗ್ರೆಸ್ ಹೈಕಮಾಂಡ್ ಆದೇಶ

Public TV
By Public TV
1 hour ago
Petrol 5
Bagalkot

ರಾಜ್ಯದಲ್ಲಿ ಪೆಟ್ರೋಲ್ ʻಹುಸಿ ಬಾಂಬ್ʼ ವದಂತಿ – ಪೆಟ್ರೋಲ್‌ಗೆ 300 ರೂಪಾಯಿ ಲಿಮಿಟ್

Public TV
By Public TV
2 hours ago
Koppal JE Suspend
Districts

ಲೋಕಾ ದಾಳಿ ವೇಳೆ 10 ಕೋಟಿ ಭ್ರಷ್ಟಾಚಾರ ಬಯಲು – ಕೊಪ್ಪಳ ನಗರಸಭೆಯ ಜೆಇ ಸಸ್ಪೆಂಡ್

Public TV
By Public TV
2 hours ago
biriyani
Bengaluru City

ಒಂದು ಸಿಲಿಂಡರ್ ಕೊಟ್ರೆ ತಿಂಗಳ ಪೂರ್ತಿ ಬಿರಿಯಾನಿ ಫ್ರೀ

Public TV
By Public TV
2 hours ago
SSLC Exams
Bengaluru City

SSLC ಹಿಂದಿ ಪರೀಕ್ಷೆ ರದ್ದಿಗೆ ಆಗ್ರಹ – ಪರೀಕ್ಷಾ ಕೇಂದ್ರಗಳಿಗೆ ಭದ್ರತೆ ಪಡೆಯುವಂತೆ DDPI ಗಳಿಗೆ ಪತ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?