ನೆಲಮಂಗಲ: ಹಾಸನ ಮಾರ್ಗವಾಗಿ ಬೆಂಗಳೂರು ಕಡೆ ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ನೋಡನೋಡುತ್ತಲೇ, ಕ್ಷಣಾರ್ಧದಲ್ಲಿ ಧಗಧಗನೆ ಹೊತ್ತಿ ಉರಿದು ಬೆಂಕಿಗಾಹುತಿಯಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ನಗರದ ಕುಣಿಗಲ್ ಸರ್ಕಲ್ ಬಳಿ ನಡೆದಿದೆ.
ಓಮ್ನಿ ಕಾರು ಹಾಸನದಿಂದ ಬೆಂಗಳೂರು ಕಡೆಗೆ ಚಲಿಸುತ್ತಿತ್ತು. ಇತ್ತ ಕುಣಿಗಲ್ ಸರ್ಕಲ್ ಬಳಿ ಬರುತ್ತಿದ್ದಂತೆ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಕಾರಿನ ಚಾಲಕ ಕಾರು ನಿಲ್ಲಿಸಿ ಕಾರಿನಲ್ಲಿದ್ದ ಪ್ರಾಯಾಣಿಕರನ್ನು ಕೆಳಗಿಳಿಸಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಜಾರಕಿಹೊಳಿ ಸಿಡಿ ಕೇಸ್ – ನರೇಶ್ ಗೌಡಗೆ ಯುವ ಕಾಂಗ್ರೆಸ್ ಮುಖಂಡ ಪಟ್ಟ
ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ನೆಲಮಂಗಲ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ.