ಲಕ್ನೋ: ಅತಿಯಾದ ಚಳಿಯನ್ನು ತಾಳಲಾರದೆ ರೈತ ಗದ್ದೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಪಂಚನೇಲಿಯಲ್ಲಿ ನಡೆದಿದೆ.
ಮೃತ ದುದೈವಿಯನ್ನು ರಾಮ್ ಕಿಶೋರ್(62) ಎಂದು ಗುರುತಿಸಲಾಗಿದೆ. ಅತಿಯಾದ ಚಳಿಯಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ರಾಮ್ ಕಿಶೋರ್ ಅವರು ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತಕ್ಷಣ ಇವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ರಾಮ್ ಕಿಶೋರ್ ಅವರು ಮಾರ್ಗ ಮಧ್ಯೆಯೇ ಕೊನೆಯುಸಿರೆಳದಿದ್ದಾರೆ ಎಂದು ರಾಮ್ ಕಿಶೋರ್ ಅವರ ಮಗ ಪೊಲೀಸರಿಗೆ ತಿಳಿಸಿದ್ದಾರೆ.
ಅತಿಯಾದ ಚಳಿಯಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಆದರೆ ಮರಣೋತ್ತರ ಪರೀಕ್ಷೆಯಿಂದ ಸಾವಿಗೆ ನಿಖರವಾದ ಕಾರಣ ತಿಳಿದು ಬರಬೇಕಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೇಗೆ ಕಳುಹಿಸಲಾಗಿದೆ ಎಂದು ಜಿಲ್ಲಾ ತುರ್ತು ಸೇವಾ ಅಧಿಕಾರಿ ಡಾ. ಅಭಿಷೇಕ್ ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ನಿನ್ನೆ ತಾಪಮಾನ 5 ಡಿಗ್ರಿ ಸೆಲ್ಸಿಯಸ್‍ಗಿಂತ ಕಡಿಮೆ ದಾಖಲಾಗಿತ್ತು. ರಾಜ್ಯದಲ್ಲಿ ಶೀತ ಅಲೆಯ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಈ ರೈತ ರಾಮ್ ಕಿಶೋರ್ ಅವರಿಗೆ ಹೆಚ್ಚಿನ ಚಳಿ ತಾಳಲಾಗದೆ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.