ಹಾಸನ: ಜಿಲ್ಲೆಯಲ್ಲಿ ಮತ್ತೆ ನೆತ್ತರು ಹರಿದಿದ್ದು, ಐದು ಜನರ ಗುಂಪು ಯುವಕನ ಕುತ್ತಿಗೆಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಚನ್ನರಾಯಪಟ್ಟಣ ತಾಲೂಕಿನ ಡಿ.ಕಾಳೇನಹಳ್ಳಿ ಗ್ರಾಮದ ಮಂಚಿನಕಟ್ಟೆ ಬಳಿ ಘಟನೆ ನಡೆದಿದ್ದು, ಕೊಲೆಯಾದ ಯುವಕನನ್ನು ಆನಂದ್ (24)ಎಂದು ಗುರುತಿಸಲಾಗಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಪುನೀತ್, ಕಾರ್ತಿಕ್, ವಿಜಯ, ಚೇತನ, ಗೌತಮ ಐದು ಮಂದಿ ಯುವಕರ ಗುಂಪು ಕೊಲೆ ಮಾಡಿರುವುದಾಗಿ ಆನಂದ್ ತಾಯಿ ಶಶಿಕಲಾ ಆರೋಪಿಸಿದ್ದಾರೆ. ಶಶಿಕಲಾ ಅವರು ನೀಡಿದ ದೂರಿನ ಮೇರೆಗೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದ್ದು, ಯುವಕ ರಕ್ತದ ಮಡುವಿನಲ್ಲಿ ಬಿದ್ದಿದ್ದಾನೆ. ಚಾಕುವಿನಿಂದ ದೇಹದ ನಾನಾ ಭಾಗಗಳಿಗೆ ಇರಿದು ಕೊಲೆ ಮಾಡಲಾಗಿದೆ. ಪಿಎಸ್‍ಐ ವಿನೋದ್ ರಾಜ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.