ಮೈಸೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು ಚಾಮುಂಡಿ ಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ.
ತಾಯಿ ಚಾಮುಂಡೇಶ್ವರಿಗೆ ಸಿಎಂ ವಿಶೇಷ ಪೂಜೆ ಸಲ್ಲಿಸಿದ್ದಾರೆ. 10 ನಿಮಿಷಗಳ ಚಾಮುಂಡೇಶ್ವರಿ ದೇವಿಯ ಮುಂದೆ ಬಿಎಸ್‍ವೈ ಪ್ರಾರ್ಥನೆ ಮಾಡಿದರು. ಇದೇ ವೇಳೆ ದೇವಾಲಯದ ಆಡಳಿತ ಮಂಡಳಿ ಸದಸ್ಯರು ಚಿನ್ನದ ರಥಕ್ಕೆ ಸಿಎಂಗೆ ಮನವಿ ಸಲ್ಲಿಕೆ ಮಾಡಿದರು. 9 ಕೋಟಿ ವೆಚ್ಚದ ರಥ ನಿರ್ಮಾಣಕ್ಕೆ ಮನವಿ ಮಾಡಲಾಯಿತು.
Advertisement
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSYBJP ಅವರು ಮತ್ತು ರಾಜ್ಯಾಧ್ಯಕ್ಷರಾದ ಶ್ರೀ @nalinkateel ಅವರು ಜನಸೇವಕ ಸಮಾವೇಶದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದರು.#JanaSevakaSamavesha pic.twitter.com/eCzkGPmiU3
— BJP Karnataka (@BJP4Karnataka) January 11, 2021
Advertisement
ಚಾಮುಂಡಿ ಬೆಟ್ಟಕ್ಕೆ ಸಿಎಂ ಭೇಟಿ ಹಿನ್ನೆಲೆಯಲ್ಲಿ ಭದ್ರತೆ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಭಕ್ತಾದಿಗಳು ಹಾಗೂ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಸಿಎಂ ಬೆಟ್ಟಕ್ಕೆ ಆಗಮಿಸುತ್ತಿದ್ದಂತೆಯೇ ದೇವಾಲಯದ ಆಡಳಿತ ಮಂಡಳಿ ಪೂರ್ಣಕುಂಭ ಸ್ವಾಗತ ಕೋರಿತ್ತು.
Advertisement
Advertisement
ಸಿಎಂಗೆ ಬಿಜೆಪಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಶಾಸಕ ಹರ್ಷವರ್ಧನ್ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಸಾಥ್ ನೀಡಿದರು.