– ಬಾಳೆಹೊನ್ನೂರು ಪಟ್ಟಣದಲ್ಲಿ ಪ್ರವಾಹ ಭೀತಿ
– ಅಗತ್ಯ ವಸ್ತುಗಳ ಸಾಗಾಟಕ್ಕೆ ಆಡ್ಡಿ
ಚಿಕ್ಕಮಗಳೂರು: ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು ವಾಹನ ಸಂಚಾರ ಬಂದ್ ಆಗಿದೆ.
ಚಾರ್ಮಾಡಿ ಘಾಟ್ ಅಲೇಖಾನ್ ಬಳಿ ರಸ್ತೆಯ ಮೇಲೆ ಮಣ್ಣಿನ ಮೇಲೆ ಭಾರೀ ಗಾತ್ರದ ಬಂಡೆ ಮರಗಳು ಬಿದ್ದಿದೆ. ಎರಡು ಜೆಸಿಬಿ ಯಂತ್ರಗಳನ್ನು ಬಳಸಿ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ತೆರವು ಮಾಡುತ್ತಿದ್ದಾರೆ.
Advertisement
Advertisement
ತುಂಗೆಯ ಆರ್ಭಟ ಹೆಚ್ಚಾಗುತ್ತಿದ್ದು ಶೃಂಗೇರಿಯಲ್ಲಿ ನದಿ ತಟದ ಮನೆಗಳಿಗೆ ನೀರು ನುಗ್ಗಿದೆ. ಕಳೆದ ರಾತ್ರಿಯಿಂದಲೇ ತುಂಗಾ ನದಿ ಉಕ್ಕಿ ಹರಿಯುತ್ತಿದ್ದು, ಶೃಂಗೇರಿ ಪಟ್ಟಣದ ಹಲವು ಮನೆಗಳು ಜಲಾವೃತಗೊಂಡಿವೆ.
Advertisement
ಮಂಗಳೂರು – ಶೃಂಗೇರಿ ಹೆದ್ದಾರಿ ಮೇಲೆ ನೀರು ಉಕ್ಕಿಹರಿಯುತ್ತಿದ್ದು ಸಂಚಾರ ಸ್ಥಗಿತಗೊಂಡಿದೆ. ರಾತ್ರಿಯಿಂದಲೇ ಪ್ರಯಾಣಿಕರು ಪರದಾಟ ನಡೆಸುತ್ತಿದ್ದಾರೆ. ಅಗತ್ಯ ವಸ್ತುಗಳ ಸಾಗಾಟಕ್ಕೆ ಮಳೆ ತೀವ್ರ ಅಡ್ಡಿ ಮಾಡಿದೆ.
Advertisement
ಅಪಾಯದ ಮಟ್ಟ ಮೀರಿ ಭದ್ರಾ ನದಿ ಹರಿಯುತ್ತಿದ್ದು, ಎನ್ಆರ್ ಪುರ ತಾಲೂಕಿನ ಬಾಳೆಹೊನ್ನೂರು ಪಟ್ಟಣದಲ್ಲಿ ಪ್ರವಾಹ ಭೀತಿ ಸೃಷ್ಟಿಯಾಗಿದೆ. ಬಾಳೆಹೊನ್ನೂರಿನ ಸಂತೆ ಮೈದಾನದ ಕಟ್ಟಡಗಳು, ಮಳಿಗೆಗಳು ಜಲಾವೃತವಾಗಿದೆ. ಬಾಳೆಹೊನ್ನೂರು-ಕಳಸ ಸಂಪರ್ಕ ಕಡಿತಗೊಂಡಿದ್ದು, ರಾತ್ರಿ ಇಡೀ ಸುರಿದ ಮಳೆಗೆ ಜನ ಹೈರಾಣಾಗಿದ್ದಾರೆ.