ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಪದೇ ಪದೇ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿನಲ್ಲಿ ಗುಡ್ಡ ಕುಸಿತವಾಗುತ್ತಿದೆ.
ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಗುಡ್ಡ ಕುಸಿತವಾಗಿದೆ. ಪರಿಣಾಮ ರಸ್ತೆಗೆ ಬಿದ್ದಿರುವ ಬೃಹತ್ ಗಾತ್ರದ ಬಂಡೆಗಳು ಮತ್ತು ಗುಡ್ಡ ಕುಸಿತಗೊಂಡ ಹಿನ್ನೆಲೆಯಲ್ಲಿ ರಸ್ತೆಗೆ ಮಣ್ಣು ಬಿದ್ದಿದೆ. ಇದರಿಂದ ರಸ್ತೆ ಎರಡು ಭಾಗ ಆಗುವ ಸಾಧ್ಯತೆ ಇದೆ.
Advertisement
Advertisement
ರಸ್ತೆ ಮಧ್ಯೆ ಮಣ್ಣು ಬಿದ್ದಿರುವುದರಿಂದ ಕೊಟ್ಟಿಗೆಹಾರದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಭಾರೀ ಮಳೆಯ ಮಧ್ಯೆಯೂ ವಾಹನಗಳು ಸಾಲುಗಟ್ಟಿ ನಿಂತಿವೆ. ಇದರಿಂದ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಮತ್ತೆ ಸಂಚಾರವನ್ನು ಬಂದ್ ಮಾಡಲಾಗಿದೆ.
Advertisement
Advertisement
ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವಾಸಿಗರು ಚಾರ್ಮಾಡಿ ಘಾಟ್‍ನಲ್ಲಿ ಸಂಚರಿಸದಂತೆ ಪೊಲೀಸರ ಸೂಚನೆ ನೀಡಿದ್ದಾರೆ. ಇಂದು ಬೆಳಗ್ಗೆ ತಾನೇ ಚಾರ್ಮಾಡಿ ಘಾಟ್ ಅಲೇಖಾನ್ ಬಳಿ ರಸ್ತೆಯ ಮೇಲೆ ಭಾರೀ ಗಾತ್ರದ ಬಂಡೆ, ಮರಗಳು ಬಿದ್ದಿದ್ದವು.