– ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು
ಚಿಕ್ಕಮಗಳೂರು: ಮಂಗಳೂರು-ಚಿಕ್ಕಮಗಳೂರು ಸಂಪರ್ಕಿಸುವ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಈಗಾಗಲೇ ಸೆಲ್ಫಿಗೆ ನಿಷೇಧ ಹೇರಲಾಗಿದೆ. ಆದರೆ ಇದೀಗ ನವಜೋಡಿಯೊಂದು ರಸ್ತೆ ತಿರುವಿನಲ್ಲಿ ಫೋಟೋಶೂಟ್ ಮಾಡಿಸಿಕೊಳ್ಳುವ ಮೂಲಕ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಹೌದು. ಹಾಸನ ಮೂಲದ ನವ ಜೋಡಿ ರಾಷ್ಟ್ರೀಯ ಹೆದ್ದಾರಿ, ಅರಣ್ಯ ಪ್ರದೇಶದ ಆಸು-ಪಾಸಿನಲ್ಲಿ ನಾನಾ ಭಂಗಿಯ ಫೋಟೋಗಳನ್ನು ತೆಗೆಯಲಾಗಿದೆ. ನಡುರಸ್ತೆಯಲ್ಲೇ ನವ ಜೋಡಿ ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಮಾಡಿಸಿಕೊಂಡಿದೆ. ಆದರೆ ಚಾರ್ಮಾಡಿ ಘಾಟ್ ನಲ್ಲಿ ಸೆಲ್ಫಿಗೆ ನಿಷೇಧವಿದ್ದರೂ ಫೋಟೋ ಶೂಟ್ ಮಾಡಿರುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಟ್ಟಿನಲ್ಲಿ ಅಪಾಯದ ಸ್ಥಳ, ರಸ್ತೆಯ ತಿರುವಿನಲ್ಲಿ ನವ ಜೋಡಿಯ ಫೋಟೋ ಶೂಟ್‍ಗೆ ಭಾರೀ ವಿರೋಧ ವ್ಯಕ್ತವಾಗಿದೆ.