ದಾವಣಗೆರೆ: ಅಪ್ರಾಪ್ತ ಬಾಲಕನೋರ್ವ ಅಪ್ರಾಪ್ತ ವಯಸ್ಸಿನ ಚಿಕ್ಕಪ್ಪನ ಮಗಳ ಮೇಲೆ ಅತ್ಯಾಚಾರ ಎಸಗಿದ್ದು ಇದೀಗ ಬಾಲಕಿ ಗರ್ಭಿಣಿಯಾಗಿರುವ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನಲ್ಲಿ ನಡೆದಿದೆ.
ಹೊನ್ನಾಳಿ ತಾಲೂಕಿನ ಗ್ರಾಮವೊಂದರಲ್ಲಿ 15 ವರ್ಷದ ಬಾಲಕಿ ಮೇಲೆ, ಅಪ್ರಾಪ್ತ ಬಾಲಕ ಅತ್ಯಾಚಾರ ಎಸಗಿದ್ದಾನೆ. ಅಪ್ರಾಪ್ತ ಬಾಲಕ ದೊಡ್ಡಪ್ಪನ ಮಗನಾಗಿದ್ದಾನೆ, ಅತ್ಯಾಚಾರಕ್ಕೊಳಗಾಗಿರುವ ಬಾಲಕಿ ಗರ್ಭಿಣಿಯಾಗಿದ್ದಾಳೆ.
ಕೂಡು ಕುಟುಂಬದಲ್ಲಿ ವಾಸಿಸುತ್ತಿದ್ದ ಬಾಲಕ ಚಿಕ್ಕಪ್ಪನ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕಿಯನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.
ಅಪ್ರಾಪ್ತ ಬಾಲಕನ ಮೇಲೆ ಹೊನ್ನಾಳಿ ಪೆÇಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧಕ್ಕೆ ಒಪ್ಪಿಸಿದ್ದಾರೆ.