ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕು ಕಚೇರಿಯ 4 ಜನರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಕಚೇರಿಯಲ್ಲಿನ 50ಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಆತಂಕ ಶುರುವಾಗಿದೆ.
ತಾಲೂಕು ಕಚೇರಿಯ ಭೂ ದಾಖಲೆಗಳ ವಿಭಾಗದ ಸಹಾಯಕ ನಿರ್ದೇಶಕಿ ಹಾಗೂ ಇಬ್ಬರು ಮಹಿಳಾ ಕೇಸ್ ವರ್ಕರ್ಸ್ ಸೇರಿದಂತೆ ಒರ್ವ ಸರ್ವೇಯರ್‍ಗೆ ಸೋಂಕು ದೃಢವಾಗಿದೆ. ಹೀಗಾಗಿ ತಾಲೂಕು ಕಚೇರಿಯಗೆ ಸಂಪೂರ್ಣ ಸೋಂಕು ನಿವಾರಕ ರಾಸಾಯನಿಕ ದ್ರಾವಣ ಸಿಂಪಡಿಸಲಾಗಿದೆ. ಅಲ್ಲದೆ ಇಡೀ ತಾಲೂಕು ಕಚೇರಿ ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.
ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 13 ಪ್ರಕರಣಗಳು ಪತ್ತೆಯಾಗಿದ್ದು, ಸೋಮವಾರ 15 ಪ್ರಕರಣಗಳು ಕಂಡು ಬಂದಿದ್ದವು. ಜಿಲ್ಲೆಯಲ್ಲಿ 214 ಜನರಿಗೆ ಸೋಂಕು ತಗುಲಿದ್ದು, ಇದರಲ್ಲಿ 165 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 4 ಜನ ಮೃತಪಟ್ಟಿದ್ದಾರೆ. ಸದ್ಯ 44 ಸಕ್ರಿಯ ಪ್ರಕರಣಗಳಿವೆ.