– ಲಾಕ್‍ಡೌನ್ ಹಿನ್ನೆಲೆ ಮನೆಯಿಂದ ಹೊರ ಬಾರದ ಜನ
ಚಿಕ್ಕಮಗಳೂರು: ಕೊರೊನಾ ಆತಂಕದಿಂದಾಗಿ ಸರ್ಕಾರ ನಾಲ್ಕನೇ ಹಂತದ ಲಾಕ್‍ಡೌನ್ ವಿಸ್ತರಿಸಿದೆ. ಆದರೆ ಕೆಲ ಸಡಿಲಿಕೆಯನ್ನು ನೀಡಿದ್ದು, ಅಗತ್ಯ ವಸ್ತುಗಳ ಖರೀದೆಗೆ ಅವಕಾಶ ಕಲ್ಪಿಸಿದೆ. ಅಲ್ಲದೆ ಇಡೀ ವಾರ ಓಡಾಡಲು ಅವಕಾಶ ನೀಡಲಾಗಿದೆ. ಭಾನುವಾರ ಮಾತ್ರ ಕಟ್ಟುನಿಟ್ಟಿನ ಲಾಕ್‍ಡೌನ್ ವಿಧಿಸಲು ನಿರ್ಧರಿಸಲಾಗಿದೆ. ಅದರಂತೆ ಚಿಕ್ಕಮಗಳೂರಿನಲ್ಲಿ ಮಳಿಗೆಗಳು ತೆರೆದಿವೆ ಆದರೆ ಭಾನುವಾರ ಲಾಕ್‍ಡೌನ್ ಇರುವುದರಿಂದ ಜನ ಮನೆಯಿಂದ ಹೊರ ಬರುತ್ತಿಲ್ಲ.
ತರಕಾರಿ, ಹಣ್ಣು, ಚಿಕನ್-ಮಟನ್, ಮೀನು ಸೇರಿದಂತೆ ಅಗತ್ಯ ಹಾಗೂ ದಿನಬಳಕೆ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಿದೆ. ಸರ್ಕಾರ ಅನುಮತಿ ನೀಡಿದ್ದರೂ ಲಾಕ್‍ಡೌನ್ ಹಿನ್ನೆಲೆ ಜನ ಹೊರಗಡೆ ಬರುತ್ತಿಲ್ಲ. ಹೀಗಾಗಿ ಅಂಗಡಿ ಮುಂಗಟ್ಟುಗಳು ಬಿಕೋ ಎನ್ನುತ್ತಿವೆ. ಇದರಿಂದಾಗಿ ವರ್ತಕರಿಗೆ ನಷ್ಟದ ಆತಂಕ ಎದುರಾಗಿದೆ.
ಲಾಕ್‍ಡೌನ್ ಹಿನ್ನೆಲೆ ಜನ ಮನೆಯಿಂದ ಹೊರ ಬರುತ್ತಿರುವುದು ತೀರಾ ವಿರಳವಾಗಿದ್ದು, ಸಾವಿರರು ರೂ. ಮೌಲ್ಯದ ಚಿಕನ್, ಮಟನ್, ಮೀನು ತಂದು ವ್ಯಾಪಾರ ಮಾಡುತ್ತಿರುವ ವರ್ತಕರಿಗೆ ನಷ್ಟ ಉಂಟಾಗಿದೆ. ಮಧ್ಯಾಹ್ನ 2 ಗಂಟೆ ವೇಳೆಗೆ ವ್ಯಾಪಾರ ಮುಗಿಸಿ ಮನೆಗೆ ಹೋಗುತ್ತಿದ್ದೆವು. ಆದರೆ ಇಂದು ಬೆಳಗ್ಗೆಯಿಂದ ಶೇ20ರಷ್ಟು ಸಹ ವ್ಯಾಪಾರವಾಗಿಲ್ಲ ಎಂದು ಚಿಂತಾಕ್ರಾಂತರಾಗಿದ್ದಾರೆ. ಚಿಕ್ಕಮಗಳೂರು ಮೀನು ಮಾರುಕಟ್ಟೆಯಲ್ಲಂತೂ ಜನರೇ ಇಲ್ಲದಂತಾಗಿದೆ.