ಬೆಂಗಳೂರು: ಕೊರೊನಾ ಲಾಕ್‍ಡೌನ್‍ನಿಂದ ಇಡೀ ದೇಶವೇ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದೆ. ಇತ್ತ ಈ ಲಾಕ್‍ಡೌನ್ ಯಾವಾಗ ಮುಗಿಯುತ್ತದೆ ಎಂಬುದು ಸಹ ತಿಳಿಯುತ್ತಿಲ್ಲ. ಹೀಗಾಗಿ ಚಿತ್ರಮಂದಿರಗಳು ಸದ್ಯಕ್ಕೆ ತೆರೆಯುದಿಲ್ಲ ಎಂದು ಅನೇಕ ನಿರ್ಮಾಪಕರು ಮತ್ತು ನಿರ್ಮಾಣ ಸಂಸ್ಥೆಗಳು ನೇರವಾಗಿ ಅಮೆಜಾನ್ ಪ್ರೈಮ್ ಮತ್ತು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸಿನಿಮಾ ಬಿಡುಗಡೆ ಮಾಡಲು ಮುಂದಾಗಿದ್ದಾರೆ.
ಅನೇಕ ಚಿತ್ರಮಂದಿರಗಳು ಮತ್ತು ಮಲ್ಟಿಪ್ಲೆಕ್ಸ್ ಮಾಲೀಕರು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸದ್ಯಕ್ಕೆ ಚಿತ್ರರಂಗದಲ್ಲಿ ಆರ್ಥಿಕ ಹೊರೆಯನ್ನು ತಗ್ಗಿಸಿಕೊಳ್ಳಲು ಅನೇಕ ನಿರ್ಮಾಪಕರಿಗೆ ಒಟಿಟಿ ಬಿಡುಗಡೆ ಅನಿವಾರ್ಯವಾಗಿವೆ. ಮುಂದಿನ ತಿಂಗಳಿನಿಂದ ವಿವಿಧ ಭಾಷೆಗಳ, ಪ್ರಮುಖ ನಟರು ನಟಿಸಿರುವ ಸಿನಿಮಾಗಳು ಅಮೆಜಾನ್ ಪ್ರೈಮ್‍ನಲ್ಲಿ ತೆರೆಕಾಣುತ್ತಿವೆ. ಈ ಕುರಿತು ಅಮೆಜಾನ್ ಪ್ರೈಮ್ ಹಾಗೂ ನಿರ್ಮಾಣ ಸಂಸ್ಥೆಗಳು ಅಧಿಕೃತವಾಗಿ ತಿಳಿಸಿವೆ.
Advertisement
Advertisement
ಪಿಆರ್‌ಕೆ ಪ್ರೊಡಕ್ಷನ್ಸ್ ನಿರ್ಮಿಸಿರುವ ‘ಲಾ’ ಮತ್ತು ‘ಫ್ರೆಂಚ್ ಬಿರಿಯಾನಿ’ ಸಿನಿಮಾಗಳು ಒಟಿಟಿ ಪ್ಲಾಟ್ ಫಾರ್ಮ್ ನ ಅಮೆಜಾನ್ ಪ್ರೈಮ್‍ನಲ್ಲಿ ಬಿಡುಗಡೆ ಮಾಡುವುದಾಗಿ ಪುನೀತ್ ರಾಜ್‍ಕುಮಾರ್ ತಿಳಿಸಿದ್ದಾರೆ. ಈ ಮೂಲಕ ಕನ್ನಡ ನಿರ್ಮಾಕಪರು ಕೂಡ ಒಟಿಟಿ ಪ್ಲಾಟ್ ಫಾರ್ಮ್ ನಲ್ಲಿ ಸಿನಿಮಾ ರಿಲೀಸ್ ಮಾಡಲು ಮುಂದಾಗಿರುವುದು ಸ್ಪಷ್ಟವಾಗಿದೆ.
Advertisement
ರಘು ಸಮರ್ಥ ಚಿತ್ರಕಥೆ ಬರೆದು ನಿರ್ದೇಶಿಸಿದ ‘ಲಾ’ ಸಿನಿಮಾ ಜೂನ್ 26ರಂದು ಅಮೆಜಾನ್ ಪ್ರೈಮ್ ಮೂಲಕ ಜಗತ್ತಿನಾದ್ಯಂತ ತೆರೆ ಕಾಣುತ್ತಿದೆ. ನಟ ಪ್ರಜ್ವಲ್ ದೇವರಾಜ್ ಪತ್ನಿ ರಾಗಿಣಿ ಪ್ರಜ್ವಲ್ ಮೊದಲ ಬಾರಿಗೆ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಇನ್ನೂ ಪನ್ನಗಾಭರಣ ನಿರ್ದೇಶನದ ‘ಫ್ರೆಂಚ್ ಬಿರಿಯಾನಿ’ ಚಿತ್ರವು ಅಮೆಜಾನ್ ಪ್ರೈಮ್‍ನಲ್ಲಿ ಜುಲೈ 24ರಂದು ಬಿಡುಗಡೆಯಾಗಲಿದೆ ಎಂದು ಪಿಆರ್‌ಕೆ ಪ್ರೊಡಕ್ಷನ್ಸ್ ಅಧಿಕೃತವಾಗಿ ಮಾಹಿತಿ ತಿಳಿಸಿದೆ.
Advertisement
https://www.facebook.com/139294346715675/posts/579010662744039/
ಅಮೆಜಾನ್ ಫ್ರೈಂನಲ್ಲಿ ಸಿನಿಮಾ ಬಿಡುಗಡೆ ಮಾಡುವುದಕ್ಕೆ ಪಿವಿಆರ್ ಮತ್ತು ಐನಾಕ್ಸ್ ಮಲ್ಟಿಪ್ಲೆಕ್ಸ್ ಪ್ರದರ್ಶಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಚಿತ್ರ ನಿರ್ಮಾಣ ಸಂಸ್ಥೆಯೊಂದು ತನ್ನ ಸಿನಿಮಾಗಳನ್ನು ಒಟಿಟಿ ಪ್ಲಾಟ್‍ಫ್ಲಾಮಂ ಮೂಲಕ ರಿಲೀಸ್ ಮಾಡಲು ಮುಂದಾಗಿದೆ. ಈ ಮೂಲಕ ಥಿಯೇಟರ್‌ನಲ್ಲಿ ಸಿನಿಮಾ ತೆರೆಕಾಣುವ ಸಂಪ್ರದಾಯವನ್ನು ಬ್ರೇಕ್ ಮಾಡಿದೆ. ಸಂಸ್ಥೆಯ ನಿರ್ಧಾರದಿಂದ ನಮಗೆ ಬೇಸರವಾಗಿದೆ ಎಂದು ಐನಾಕ್ಸ್ ಪತ್ರದ ಮೂಲಕ ತಿಳಿಸಿದೆ.
https://www.facebook.com/prkproductionsofficial/photos/a.170301270281649/578996506078788/?type=3&theater
ಈ ಹಿಂದೆ ಅಂದರೆ 2013ರಲ್ಲಿ ನಟ ಕಮಲ್‍ಹಾಸನ್ ತಮ್ಮ ಸಂಸ್ಥೆಯ ‘ವಿಶ್ವರೂಪಂ’ ಸಿನಿಮಾವನ್ನು ಡೈರೆಕ್ಟ್ ಟು ಹೋಮ್ (ಡಿಟಿಎಚ್) ಮೂಲಕ ವಿತರಣೆ ಮಾಡಲು ಮುಂದಾಗಿದ್ದರು. ಈ ವೇಳೆ ಚಿತ್ರ ಪ್ರದರ್ಶಕರು ಹಾಗೂ ಚಿತ್ರೋದ್ಯಮ ವಿರೋಧ ವ್ಯಕ್ತಪಡಿಸಿತ್ತು. ಕೊನೆಗೆ ಸಂಪ್ರದಾಯವಾಗಿ ಸಿನಿಮಾವನ್ನು ಬಿಡುಗಡೆ ಮಾಡಬೇಕಾಯಿತು.
ಕಳೆದ ತಿಂಗಳು ತಮಿಳು ನಟ ಸೂರ್ಯ ತಮ್ಮ ಸಂಸ್ಥೆಯಲ್ಲಿ ನಿರ್ಮಾಣವಾಗಿದ್ದ ‘ಪೂಣ್‍ಮಗಳ್ ವಂದಾಳ್’ ಸಿನಿಮಾವನ್ನು ಒಟಿಟಿ ಪ್ಲಾಟ್‍ಫ್ಲಾರ್ಮ್ ನಲ್ಲಿ ರಿಲೀಸ್ ಮಾಡಲು ಮುಂದಾಗಿದ್ದರು. ಒಂದು ವೇಳೆ ಸಿನಿಮಾ ಬಿಡುಗಡೆ ಮಾಡಿದರೆ ಬಹಿಷ್ಕರಿಸುವುದಾಗಿ ಘೋಷಿಸಿದ್ದರು. ನಂತರ ಮಾತುಕತೆಯ ಮೂಲಕ ಸಮಸ್ಯೆಯನ್ನು ಬಗೆಹರಿಸಲಾಗಿತ್ತು.
ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ಆಯುಷ್ಮನ್ ಖುರಾನಾ ಅಭಿನಯದ ‘ಗುಲಾಬೋ ಸಿತಾಬೋ’ ಸಿನಿಮಾವವನ್ನು ಜೂನ್ 12ಕ್ಕೆ ಜಗತ್ತಿನಾದ್ಯಂತ ಅಮೆಜಾನ್ ಪ್ರೈಮ್‍ನಲ್ಲಿ ಬಿಡುಗಡೆ ಮಾಡಲು ನಿರ್ಮಾಪಕರು ಮುಂದಾಗಿದ್ದಾರೆ.